Advertisement

ನಾನು ಪಕ್ಷ ನಿಷ್ಠ,ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ಧ:ಡಿ.ಕೆ.ಶಿವಕುಮಾರ್

01:28 PM Jan 19, 2019 | Team Udayavani |

ಬೆಂಗಳೂರು: ನಾನು ಕಾಂಗ್ರೆಸ್‌ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಪಕ್ಷವೇ ನನಗೆ ಸುಪ್ರೀಂ. ಹೈಕಮಾಂಡ್‌ ಸಚಿವ ಸ್ಥಾನ ಬಿಟ್ಟು ಕೊಡಬೇಕೆಂದು ಹೇಳಿದರೆ ಸಿದ್ದನಿದ್ದೇನೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿಕೆ ನೀಡಿದ್ದಾರೆ. 

Advertisement

ವಿಧಾನ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನನಗೆ ಧರಂ ಸಿಂಗ್‌ ಅವರು ಮುಖ್ಯಮಂತ್ರಿಯಾಗಿದ್ದಾಗ ಸಚಿವ ಸ್ಥಾನ ನೀಡಿರಲಿಲ್ಲ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಸಚಿವ ಸ್ಥಾನ ನೀಡಿರಲಿಲ್ಲ ಆಗ ನಾನು ಬಾಯಿ ಮುಚ್ಚಿಕೊಂಡು ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೆ ಎಂದರು. 

7 ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಈಗಲೂ ಸಚಿವ ಸ್ಥಾನ ಬಿಟ್ಟು ಕೊಡಲು ಹೇಳಿದರೆ ಸಿದ್ದನಿದ್ದೇನೆ ಎಂದಿದ್ದಾರೆ.

ರಮೇಶ್‌ ಜಾರಕಿಹೊಳಿ ಅವರು ಡಿಕೆಶಿ ಅವರನ್ನು ಸಚಿವ ಸ್ಥಾನದಿಂದ ಕೈಬಿಡುವಂತೆ ಪಟ್ಟು ಹಿಡಿದಿದ್ದಾರೆ ಎನ್ನುವ ವರದಿಗಳ ಬೆನ್ನಲ್ಲೇ ಡಿ.ಕೆ.ಶಿವಕುಮಾರ್‌ ಅವರು ಈ ಹೇಳಿಕೆ ನೀಡುವ ಮೂಲಕ ಪಕ್ಷ ನಿಷ್ಠೆ ತೋರಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next