Advertisement

ರಿಮೋಟ್‌ ಕಂಟ್ರೋಲ್‌ ಸಿಎಂ ಎಂದ ಪ್ರಧಾನಿಗೆ ತಿರುಗೇಟು ನೀಡಿದ ಎಚ್‌ಡಿಕೆ

12:49 PM Mar 06, 2019 | |

ಬೆಂಗಳೂರು: ರಿಮೋಟ್‌ ಕಂಟ್ರೋಲ್‌ ಮುಖ್ಯಮಂತ್ರಿ ಎಂದು ಟೀಕೆ ಮಾಡಿದ್ದ  ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದು, ನಾನು ರಿಮೋಟ್‌ ಕಂಟ್ರೋಲ್‌ ಆಗಿದ್ದುಕೊಂಡೇ ಅಭಿವೃದ್ಧಿ ಮಾಡುತ್ತಿದ್ದೇನೆ ಎಂದಿದ್ದಾರೆ. 

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಎಚ್‌ಡಿಕೆ , ‘ಮೋದಿ ಮಾತಿನಂತೆ ನಾನು ರಿಮೋಟ್‌ ಕಂಟ್ರೋಲ್‌ ಸಿಎಂ. ನಮ್ಮ ಅಭಿವೃದ್ಧಿ ಬಗ್ಗೆ ಅವರಿಗೂ ಮಾಹಿತಿ ಇದೆ. ಅವರಿಗಿಂತಲೂ ದೊಡ್ಡ ಮಟ್ಟದಲ್ಲಿ ಕೆಲಸ ಮಾಡಿದ್ದೇನೆ. ಅವರಿಂದ ಹೇಳಿಸಿಕೊಳ್ಳುವ ಅವಶ್ಯಕತೆ ನನಗಿಲ್ಲ’ ಎಂದು ಕಿಡಿ ಕಾರಿದ್ದಾರೆ. 

ಕಲಬುರಗಿಯಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು ಕುಮಾರಸ್ವಾಮಿ ಅವರನ್ನು ರಿಮೋಟ್‌ ಕಂಟ್ರೋಲ್‌ ಸಿಎಂ ಎಂದಿದ್ದರು. ಮಾತ್ರವಲ್ಲದೆ ಮುಖ್ಯಮಂತ್ರಿ ಎಚ್‌ಡಿಕೆ ಅರ್ಹ ರೈತರ ಪಟ್ಟಿಯನ್ನು ಕೇಂದ್ರಕ್ಕೆ ಕಳುಹಿಸಿಲ್ಲ. ಈ ಸರ್ಕಾರ ರೈತರ ವಿರೋಧಿಯಾಗಿದೆ ಎಂದಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next