Advertisement

ಸಿದ್ದು ಜತೆ ನಾನು ಈಗಲೂ ಚೆನ್ನಾಗಿದ್ದೇನೆ: ಸಚಿವ ಎಂ.ಟಿ.ಬಿ ನಾಗರಾಜ್‌

08:37 PM Oct 07, 2022 | Team Udayavani |

ಹೂವಿನಹಡಗಲಿ: ಸಿದ್ದರಾಮಯ್ಯ ಜತೆ ನಾನು ಈಗಲೂ ತುಂಬಾ ಚೆನ್ನಾಗಿದ್ದೇವೆ. ಅವರ ಬಗ್ಗೆ ನನಗೆ ಈಗಲೂ ಅಭಿಮಾನವಿದೆ ಎಂದು ಪೌರಾಡಳಿತ ಹಾಗೂ ಸಣ್ಣ ಕೈಗಾರಿಕೆಗಳ ಸಚಿವ ಎಂ.ಟಿ.ಬಿ ನಾಗರಾಜ್‌ ಹೇಳಿದರು.

Advertisement

ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಬಿಟ್ಟು ಬಂದಿದ್ದಕ್ಕೆ ನನಗೇನೂ ನೋವಿಲ್ಲ. ಕಾಂಗ್ರೆಸ್‌ನವರು ನನ್ನನ್ನು ಪುನಃ ಪಕ್ಷಕ್ಕೆ ಕರೆದಿಲ್ಲ. ಮುಂದಿನ ದಿನಗಳಲ್ಲಿ ಬಿಜೆಪಿಯಲ್ಲೇ ಉಳಿಯುತ್ತೇನೆ ಎಂದರು.

ಪೇಸಿಎಂ ಬಗ್ಗೆ ವಿಪಕ್ಷದವರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ರಾಜಕೀಯದಲ್ಲಿ ಯಾತ್ರೆಗಳು ಸಾಮಾನ್ಯ. ಕಾಂಗ್ರೆಸ್‌ನ ಭಾರತ್‌ ಜೋಡೋ ಯಾತ್ರೆಯಲ್ಲೇನೂ ವಿಶೇಷ ಇಲ್ಲ. ರಾಜ್ಯ ಹಾಗೂ ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ಜನಪರವಾಗಿ ಕೆಲಸ ಮಾಡುತ್ತಿದೆ. ಕೋವಿಡ್‌ ಸಂದರ್ಭದಲ್ಲಿ ಆಗಿರುವ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದೆ ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next