Advertisement

ನನಗೂ ಸವದಿಗೂ ಸಚಿವ ಸ್ಥಾನ ಸಿಗಬೇಕಿತ್ತು, ಆದರೆ ಸಿಕ್ಕಿಲ್ಲ..: Jagadish Shettar

12:34 PM May 28, 2023 | Team Udayavani |

ಹುಬ್ಬಳ್ಳಿ: ಕಾಂಗ್ರೆಸ್ ಸೇರುವ ಮುನ್ನಾ ಯಾವುದೇ ಷರತ್ತು ಹಾಕದೆ ಹೋಗಿದ್ದೇನೆ. ಸಂಪುಟದಲ್ಲಿ ಸಚಿವನಾಗಿರಬೇಕು ಎನ್ನುವ ಜನರ ಈಡೇರಿಲ್ಲ. ಇನ್ನು ಹಲವು ಸ್ಥಾನಗಳಿದ್ದು, ಯಾವುದೇ ಜವಬ್ದಾರಿ ನೀಡಿದರೂ ನಿಭಾಯಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈಯಕ್ತಿಕವಾಗಿ ನಾನು ಯಾವುದೇ ಆಸೆ ವ್ಯಕ್ತಪಡಿಸಿಲ್ಲ.ಯಾವ ರೀತಿ ಮುಂದೆ ಹೋಗಬೇಕು ಎಂಬ ಬಗ್ಗೆ ಕಾಂಗ್ರೆಸ್ ತೀರ್ಮಾನ ಮಾಡುತ್ತದೆ. ಸವದಿ ಹಾಗೂ ನನಗೂ ಸಚಿವ ಸ್ಥಾನ ಸಿಗಬೇಕಿತ್ತು ಆದರೆ ಆಗಿಲ್ಲ. ಕಾಂಗ್ರೆಸ್ ಯಾವ ಜವಾಬ್ದಾರಿ ನೀಡುತ್ತೆ ಅದನ್ನ ನಿಭಾಯಿಸುತ್ತೇನೆ. ಒತ್ತಡದಲ್ಲಿ ಸ್ಥಾನಮಾನ ಕೊಡಲು ಆಗಲಿಲ್ಲ. ಉತ್ತರ ಕರ್ನಾಟಕ ಭಾಗದ ನಾಯಕರಿಗೆ ಕೆಲವು ಪ್ರಮುಖ ಸ್ಥಾನ ಸಿಕ್ಕಿವೆ ಎಂದರು.

ನನ್ನೊಬ್ಬನನ್ನ ಸೋಲಿಸಲು ಹೋಗಿ ಬಿಜೆಪಿ ತಾನೇ ಸೋತಿದೆ. ಲೋಕಸಭಾ ಚುನಾವಣೆಗೆ ಇನ್ನು ಒಂದು ವರ್ಷ ಇದೆ. ಲೋಕಸಭೆ ಚುನಾವಣೆಗೆ ಯಾವ ರೀತಿ ತಯಾರಿ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಸಮಾಲೋಚನೆ ನಡೆದಿದೆ. ಸೋಲಿಗೆ ಕಾರಣವಾದದ್ದು ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ. ಹಿರಿಯ ನಾಯಕರೊಂದಿಗೆ ಈ ಕುರಿತು ಚರ್ಚೆ ಆಗಿಲ್ಲ ಎಂದರು.

ಗ್ಯಾರಂಟಿ ಅನುಷ್ಠಾನ ಮಾಡಲು ಸ್ವಲ್ಪ ಸಮಯ ಬೇಕಾಗುತ್ತದೆ. ಇದನ್ನು ಪ್ರತಿಪಕ್ಷಗಳು ರಾಜಕೀಯವಾಗಿ ಬಳಸಿಕೊಳ್ಳುತ್ತಿವೆ. ಹೊಸ ಸರ್ಕಾರ ಬಂದಿದೆ. ರಾಜಕಾರಣದಲ್ಲಿ ತಾಳ್ಮೆ ಬೇಕಾಗುತ್ತದೆ‌ ಎಂದು ಶೆಟ್ಟರ್ ಹೇಳಿದರು.

ಬಿಜೆಪಿಯಲ್ಲಿ ಪಕ್ಷ ಕಟ್ಟುವಂತವರು ಯಾರಿದ್ದಾರೆ? ರಾಜ್ಯದಲ್ಲಿ ಬಿಜೆಪಿಯನ್ನು ಈ ಪರಿಸ್ಥಿತಿ ತರಲು ಕಾರಣರಾದವರು ಈಗ ಎಲ್ಲಿದ್ದಾರೆ. ಇನ್ನೂ ನನ್ನ ಪ್ರಶ್ನೆಗೆ ಯಾರು ಉತ್ತರ ಕೊಟ್ಟಿಲ್ಲ. ಅವರೆಲ್ಲರೂ ಈಗ ನಾಪತ್ತೆಯಾಗಿದ್ದಾರೆ. ವಿರೋಧ ಪಕ್ಷದ ನಾಯಕನನ್ನು ಆರಿಸಲು ಯಾರಿಲ್ಲ. ರಾಷ್ಟ್ರೀಯ ಪಕ್ಷಕ್ಕೆ ಇಂತಹ ಪರಿಸ್ಥಿತಿ ಬರಬಾರದಿತ್ತು ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next