ನವದೆಹಲಿ: ಜೈಲಿನಲ್ಲಿರುವ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಮಾಜಿ ಪ್ರಿಯಕರ, ವಂಚಕ ಸುಕೇಶ್ ಚಂದ್ರಶೇಖರ್ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಗೆ ಬರೆದ ಪತ್ರದಲ್ಲಿ ತಾನು ಜೈಲಿನಲ್ಲಿ ಸುರಕ್ಷಿತವಾಗಿರಲು ದೆಹಲಿ ಸಚಿವ ಸತ್ಯೇಂದ್ರ ಜೈನ್ ಸೇರಿದಂತೆ ಆಮ್ ಆದ್ಮಿ ಪಕ್ಷಕ್ಕೆ ಹತ್ತು ಕೋಟಿ ರೂಪಾಯಿ ನೀಡಿರುವುದಾಗಿ ಆರೋಪಿಸಿದ್ದಾನೆ.
ಇದನ್ನೂ ಓದಿ:ರಾಜ್ಯದ ಎಲ್ಲ ರಂಗಗಳಲ್ಲಿ ಕನ್ನಡ ಬಳಕೆಗೆ ಕಾನೂನು ರಚನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸುಕೇಶ್ ಹೇಳಿಕೆಯನ್ನು ಇದೀಗ ಭಾರತೀಯ ಜನತಾ ಪಕ್ಷ ಅಸ್ತ್ರವನ್ನಾಗಿ ಮಾಡಿಕೊಂಡಿದ್ದು, ಆಪ್ ವಂಚಕರ ಪಕ್ಷವಾಗಿದೆ ಎಂದು ದೂರಿದೆ. ಜೈಲಿನಲ್ಲಿ ಸುರಕ್ಷಿತವಾಗಿರಲು “ಪ್ರೊಟೆಕ್ಷನ್ ಮನಿ”(ಹಣದ ಸುರಕ್ಷತೆ)ಗಾಗಿ ಜೈಲಿನಲ್ಲಿರುವ ಆಪ್ ಸಚಿವ ಸತ್ಯೇಂದ್ರ ಜೈನ್ ಗೆ 10 ಕೋಟಿ ರೂಪಾಯಿ ನೀಡಿರುವುದಾಗಿ ಲೆಫ್ಟಿನೆಂಟ್ ಗವರ್ನರ್ ಗೆ ಬರೆದ ಪತ್ರದಲ್ಲಿ ಆರೋಪಿಸಿರುವುದಾಗಿ ವರದಿ ವಿವರಿಸಿದೆ.
ಸತ್ಯೇಂದ್ರ ಜೈನ್ ನನಗೆ 2015ರಿಂದಲೂ ನನಗೆ ಪರಿಚಯ. ಅಷ್ಟೇ ಅಲ್ಲ ಆಮ್ ಆದ್ಮಿ ಪಕ್ಷಕ್ಕೆ ದೇಣಿಗೆಯಾಗಿ 50 ಕೋಟಿ ರೂಪಾಯಿ ನೀಡಿರುವುದಾಗಿ ಸುಕೇಶ್ ಚಂದ್ರಶೇಖರ್ ದೂರಿರುವುದಾಗಿ ವರದಿ ತಿಳಿಸಿದೆ.
Related Articles
ಆದರೆ ಈ ಆರೋಪವನ್ನು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಳ್ಳಿ ಹಾಕಿದ್ದು, ಮೊರ್ಬಿ ಸೇತುವೆ ಕುಸಿತ ದುರಂತದ ವಿಷಯದ ಕುರಿತು ಜನರ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ಈ ತಂತ್ರ ಹೂಡಿದೆ ಎಂದು ತಿರುಗೇಟು ನೀಡಿದ್ದಾರೆ.