Advertisement

ನಾನು ಸಿಎಂ ಆಗುವುದನ್ನು ತಪ್ಪಿಸಲು ಸಾಧ್ಯವಿಲ್ಲ: ಎಚ್‌.ಡಿ. ಕುಮಾರಸ್ವಾಮಿ

10:38 AM Aug 15, 2022 | Team Udayavani |

ದಾಸರಹಳ್ಳಿ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿಗಿಂತ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಜೆಡಿಎಸ್‌ ಸರ್ಕಾರ ರಚಿಸಲಿದ್ದು, ನಾನು ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು.

Advertisement

ಇದನ್ನೂ ಓದಿ:ಧ್ವಜಾರೋಹಣ:ಗಮನಸೆಳೆದ ಪ್ರಧಾನಿ ಮೋದಿ ಪೇಟಾ, ಬಿಳಿಕುರ್ತಾ; ಈ ಬಾರಿ ಟೆಲಿಪ್ರಾಂಪ್ಟರ್ ಗೆ ಕೊಕ್

ದಾಸರಹಳ್ಳಿ ಕ್ಷೇತ್ರದಲ್ಲಿ ನಡೆದ ಜೆಡಿಎಸ್‌ ಕಾರ್ಯಕರ್ತರ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಬಿಬಿಎಂಪಿ ವಾರ್ಡ್‌ಗಳ ಮೀಸಲಾತಿಯನ್ನು ಬಿಜೆಪಿ ಸಚಿವರು ತಮಗೆ ಬೇಕಾದಂತೆ ಪ್ರಕಟಿಸಿಕೊಂಡು ನಮ್ಮ ಶಕ್ತಿ ಕುಂದಿಸುವ ಹುನ್ನಾರ ನಡೆಸಿದ್ದಾರೆ. ಇದಕ್ಕೆ ನಾವು ತಕ್ಕ ಉತ್ತರ ನೀಡಬೇಕಿದೆ ಎಂದರು.

ರಾಜರಾಜೇಶ್ವರಿ ನಗರ ಕ್ಷೇತ್ರ ಜೆಡಿಎಸ್‌ ಭದ್ರಕೋಟೆಯಾಗಿದ್ದು, ನಮ್ಮದೇ ಆದ ತಪ್ಪಿನಿಂದ ಸೋಲು ಅನುಭವಿಸಿದ್ದೇವೆ. ಇದೀಗ ಯುವಕರಿಗೆ ಅವಕಾಶ ನೀಡುವ ಮೂಲಕ ಹಿಂದಿನ ತಪ್ಪುಗಳನ್ನು ತಿದ್ದಿಕೊಳ್ಳಬೇಕಿದೆ ಎಂದರು.

ಶಾಸಕ ಆರ್‌. ಮಂಜುನಾಥ್‌, ಪಾಲಿಕೆ ಚುನಾವಣೆಯಲ್ಲಿ ದಾಸರಹಳ್ಳಿ ಕ್ಷೇತ್ರದ 12ಕ್ಕೆ 12 ವಾರ್ಡ್‌ ಗಳನ್ನು ಜೆಡಿಎಸ್‌ ಗೆಲ್ಲಲೇಬೇಕು ಎಂದು ಪಣ ತೊಟ್ಟಿದ್ದೇನೆ ಎಂದರು. ಈ ವೇಳೆ ವಿಧಾನ ಪರಿಷತ್‌ ಸದಸ್ಯ ಕೆ.ಎ.ತಿಪ್ಪೇಸ್ವಾಮಿ, ಬೆಂಗಳೂರು ನಗರ ಅಧ್ಯಕ್ಷ ಪ್ರಕಾಶ್‌, ಮಹಿಳಾ ಘಟಕದ ಅಧ್ಯಕ್ಷೆ ರಾಣಿ ಪ್ರತಾಪ್‌, ವಕ್ತಾರ ಮುಕುಂದರಾಜ್‌, ಮಾಧ್ಯಮ ಕಾರ್ಯದರ್ಶಿ ಪಿ.ಕೆ. ಚನ್ನಕೃಷ್ಣ ಇತರರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next