Advertisement

ಸಿ.ಎಂ.ಇಬ್ರಾಹಿಂ ರಾಜೀನಾಮೆ ಪತ್ರ ನನಗಿನ್ನೂ ಬಂದಿಲ್ಲ: ಸಿದ್ದರಾಮಯ್ಯ

10:40 AM Mar 13, 2022 | Team Udayavani |

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಅವರ ರಾಜೀನಾಮೆ ಪತ್ರ ನನಗೆ ತಲುಪಿಲ್ಲ. ಪತ್ರ ಬಂದ ಬಳಿಕ ಈ ಬಗ್ಗೆ ಮಾತನಾಡುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

Advertisement

ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಶನಿವಾರ ಸಿ.ಎಂ ಇಬ್ರಾಹಿಂ ಹೇಳಿದ್ದರು. ಸಿದ್ದರಾಮಯ್ಯನವರಿಗೂ ರಾಜೀನಾಮೆ ಪತ್ರ ಕಳುಹಿಸಿದ್ದೇನೆ ಎಂದಿದ್ದರು. ಆದರೆ ಇನ್ನೂ ನನಗೆ ರಾಜೀನಾಮೆ ಪತ್ರ ಸಿಕ್ಕಿಲ್ಲ ಎಂದು ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ:ಅವನು ನನ್ನ ಮಗನಲ್ಲ, ಮೋದಿ ಪುತ್ರ : ವಿದ್ಯಾರ್ಥಿ ಪೋಷಕರ ಭಾವನಾತ್ಮಕ ನುಡಿ

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಕೆಲ ವಾರಗಳ ಹಿಂದೆಯೇ ಸಿ.ಎಂ. ಇಬ್ರಾಹಿಂ ಹೇಳಿದ್ದರು. ಆದರೆ ಸಿಎಂ ಇಬ್ರಾಹಿಂ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹಲವು ಪ್ರಯತ್ನ ನಡೆಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next