ಬೆಂಗಳೂರು: ಫೈಟರ್ ರವಿ ಬಿಜೆಪಿಗೆ ಸೇರ್ಪಡೆಯಾಗಿರುವುದು ನನ್ನ ಗಮನಕ್ಕೆ ಬಂದಿಲ್ಲ. ನಾನು ಆ ಕಾರ್ಯಕ್ರಮಕ್ಕೂ ಹೋಗಿರಲಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
Advertisement
ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ರೌಡಿಗಳು, ಸಮಾಜಘಾತುಕರನ್ನು ಸೇರಿಸಿಕೊಳ್ಳುವುದಿಲ್ಲ. ಅಚಾನಕ್ ಆಗಿ ಆ ರೀತಿ ಆಗಿದ್ದರೆ ರಾಜ್ಯಾಧ್ಯಕ್ಷರ ಜತೆ ಮಾತನಾಡುತ್ತೇನೆಂದು ತಿಳಿಸಿದರು.
ಕಾಂಗ್ರೆಸ್ ರೌಡಿ ಗೂಂಡಾಗಳನ್ನು ಬೆಳೆಸುವ ಪಕ್ಷ, ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್‌ಗೆ ಇಲ್ಲ. ಕಾಂಗ್ರೆಸ್ ಗೂಂಡಾಗಳನ್ನು ಉತ್ಪಾದಿಸುವ ಕಾರ್ಖಾನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.