Advertisement

ಫೋಟೋ ವಿಡಿಯೋ ನಿಷೇಧದ ಆದೇಶ ನನ್ನ ಗಮನಕ್ಕೆ‌ ಬಂದಿರಲಿಲ್ಲ: ಸಿಎಂ ಬೊಮ್ಮಾಯಿ

09:54 AM Jul 16, 2022 | Team Udayavani |

ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಫೋಟೋ ವಿಡಿಯೋ ಚಿತ್ರೀಕರಣ ನಿಷೇಧದ ಆದೇಶ ನನ್ನ ಗಮನಕ್ಕೆ‌ ಬಂದಿರಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

Advertisement

ಈ ಬಗ್ಗೆ ಸರ್ಕಾರಿ ನೌಕರರು ಬಹಳ ದಿನದಿಂದ ಹೇಳುತ್ತಿದ್ದರು. ಪಾಪ ಅವರು ಹೇಳುವುದರಲ್ಲೂ ಅರ್ಥವಿದೆ. ಕೆಲವು ಹೆಣ್ಣು ಮಕ್ಕಳದೆಲ್ಲ ಫೋಟೋ ತೆಗೆದು, ತೊಂದರೆಯಾಗಿತ್ತು. ಹೀಗಾಗಿ ಅವರು ನಿಷೇಧ ಆದೇಶ ಮಾಡಿದ್ದರು ಎಂದು ಸಿಎಂ ಸುದ್ದಿಗಾರರಿಗೆ ಹೇಳಿದರು.

ಯಾವುದನ್ನು ಮುಚ್ಚಿಡುವಂತ ಪ್ರಶ್ನೆಯೇ ಇಲ್ಲ. ಯಾರು ಏನಾದರೂ ಹೇಳಿಕೊಳ್ಳಲಿ, ನಮ್ಮ ಸರ್ಕಾರ ಪಾರದರ್ಶಕವಾಗಿ ನಡೆಯುತ್ತಿದೆ. ಹೀಗಾಗಿ ಯಾವುದೇ ರೀತಿಯ ನಿರ್ಬಂಧ ಹಾಕಬಾರದು. ಮೊದಲು ಇದ್ದ ರೀತಿಯ ನಿಯಮ ಇರಬೇಕು ಎಂದು ತೀರ್ಮಾನ ಮಾಡಿದ್ದೇವೆ ಎಂದು ನಿಷೇಧ ಆದೇಶವನ್ನು ವಾಪಾಸ್ ಪಡೆದ ಬಗ್ಗೆ ಸಿಎಂ ಹೇಳಿದರು.

ಬಿಜೆಪಿ ಚಿಂತನ- ಮಂಥನ ಸಭೆಯ ಬಗ್ಗೆ ಮಾತನಾಡಿ, ನಿನ್ನೆ ಇಡೀ ದಿನ ಪ್ರಮುಖರ ಜೊತೆ ಚಿಂತನಾ ಸಭೆಯಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರ ಹಾಗೂ ಪಕ್ಷ ಯಾವ ರೀತಿ ಸಮನ್ವಯತೆಯಿಂದ‌ ಹೋಗುವ ಬಗ್ಗೆ, ಸರ್ಕಾರದ ಯೋಜನೆ ಜನರಿಗೆ ತಲುಪಿಸುವ ಬಗ್ಗೆ ಚರ್ಚೆಯಾಗಿದೆ ಎಂದರು.

ಇದನ್ನೂ ಓದಿ:ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋ ನಿಷೇಧ: ತಡರಾತ್ರಿ ಆದೇಶ ಹಿಂಪಡೆದ ಸರ್ಕಾರ

Advertisement

ಸರ್ಕಾರ ಒಂದು ವರ್ಷ ಪೂರೈಸಿದ್ದಕ್ಕೆ ದೊಡ್ಡಬಳ್ಳಾಪುರದಲ್ಲಿ ದೊಡ್ಡ ರಾಲಿ ಮಾಡಲು ನಿರ್ಧಾರ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಪ್ರವಾಸ ಮಾಡುತ್ತೇನೆ. ದೊಡ್ಡಬಳ್ಳಾಪುರದಲ್ಲಿ ಪಕ್ಷ ವಿಶೇಷ ರಾಲಿ ಮಾಡಲು ತೀರ್ಮಾನ ಮಾಡಿದ್ದೇವೆ. ಸರ್ಕಾರಿ ಕಾರ್ಯಕ್ರಮ ಬೆಂಗಳೂರಲ್ಲಿ ನಡೆಯಲಿದೆ ಎಂದರು.

ಸಭೆ ನಡುವೆ ನಿನ್ನೆ ಪ್ರವಾಹ ಪೀಡಿತ ಜಿಲ್ಲೆಗಳ ಡಿಸಿಗಳ ಜೊತೆ ಮಾತಾಡಿದ್ದೇನೆ. ಅಲ್ಲಿನ ಸ್ಥಳೀಯ ನದಿಗಳ ಪ್ರವಾಹದ ಬಗ್ಗೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ ನೀಡಿದ್ದೇನೆ. ನದಿ ಪಾತ್ರದ ಪಕ್ಕದಲ್ಲಿ ಇರುವವರ ಬಗ್ಗೆ ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ ನೀಡಲಾಗಿದೆ. ಆಶ್ರಯ ಕೇಂದ್ರಗಳನ್ನು ಕೂಡಲೇ ತೆರೆಯಲು ಸೂಚನೆ ನೀಡಿದ್ದೇನೆ. ಮನೆಗಳು ಬಿದ್ದಲ್ಲಿ ಕೂಡಲೇ ಪರಿಹಾರ ಕೊಡುವಂತೆ ಸೂಚನೆ ನೀಡಿದ್ದೇವೆ. ಇದಕ್ಕೆಲ್ಲದ್ದಕ್ಕೂ ಹಣ ಒದಗಿಸಿದ್ದೇನೆ. ಮೂಲಭೂತ ಸೌಕರ್ಯಕ್ಕಾಗಿ 500 ಕೋಟಿ ಒದಗಿಸಿದ್ದೇನೆ. ಮನೆಗಳನ್ನು ಕಟ್ಟಲು ಹಣ ಹೆಚ್ಚಿಗೆ ಮಾಡಿದ್ದೇವೆ. ಕೇಂದ್ರ ಸರ್ಕಾರದ ಬೆಳೆ ಪರಿಹಾರಕ್ಕಿಂತ ಹೆಚ್ಚು ಮಾಡಿದ್ದೇವೆ. ಪ್ರವಾಹದ ಸಂದರ್ಭದಲ್ಲಿ ತೊಂದರೆಗೀಡಾದವರ ನೆರವಿಗೆ ಸರ್ಕಾರ ಕೂಡಲೇ ಧಾವಿಸಲಿದೆ. ಆಮೇಲೆ ಸೂಕ್ತವಾದ ಪರಿಹಾರವನ್ನು ಕೂಡ ನಮ್ಮ ಸರ್ಕಾರ ಕೊಡಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next