Advertisement
ಸಿಡಿಯಲ್ಲಿದ್ದ ಯುವತಿ ಇಂದು ಬಿಡುಗಡೆ ಮಾಡಿದ ವಿಡಿಯೋದಲ್ಲಿ ತಾನು ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಲು ಪ್ರಯತ್ನಿಸಿದ್ದಾಗಿ ಹೇಳಿಕೊಂಡಿದ್ದಾಳೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾವು ರಾಜಕಾರಣಿಗಳು ಹಾಗೂ ನೀವು ಮಾಧ್ಯಮದವರು ಸಾರ್ವಜನಿಕ ಜೀವನದಲ್ಲಿ ಇರುವವರು. ಯಾವುದೇ ಪಕ್ಷದ ರಾಜಕಾರಣಿ ಆದರೂ ನೊಂದವರಿಗೆ, ಕಷ್ಟ ಅಂತಾ ಬಂದವರಿಗೆ ಸಹಾಯ ಮಾಡುವ ಪ್ರವೃತ್ತಿ ಹೊಂದಿರುತ್ತಾರೆ. ಹಾಗೇ ಆ ಹೆಣ್ಣು ಮಗಳು ನನ್ನ ಭೇಟಿಗೆ ಪ್ರಯತ್ನಿಸಿದ್ದೆ ಅಂತಾ ಹೇಳಿದ್ದಾಳೆ ಎಂದರು.
Related Articles
Advertisement
ಇದನ್ನೂ ಓದಿ: ಸಿಡಿ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಬಂದಿದ್ದರಲ್ಲಿ ಅಚ್ಚರಿ ಅನಿಸಿಲ್ಲ: ಸೋಮಶೇಖರ್
ನರೇಶ್ ಮಾಧ್ಯಮದ ವ್ಯಕ್ತಿ. ನನಗೆ ಪರಿಚಯಸ್ಥ. ನನಗೆ ಬೇಕಾದ ಹುಡುಗ. ಅವರ ಮನೆಗೂ ಹೋಗಿದ್ದೇನೆ. ಅನೇಕ ಬಾರಿ ಭೇಟಿ ಮಾಡಿದ್ದು, ಅನೇಕ ವಿಚಾರಗಳನ್ನು ಆತ ಹಂಚಿಕೊಂಡಿದ್ದ ಎಂದರು.
ರಮೇಶ್ ಜಾರಕಿಹೊಳಿ ಅವರು ನನ್ನನ್ನು ಸ್ಮರಿಸಿಕೊಂಡರೆ, ನಾನ್ಯಾಕೆ ಬೇಡ ಎನ್ನಲಿ. ನನ್ನ ಬಗ್ಗೆ ಅವರಿಗೆ ಅನುಕಂಪ ಇರುವುದಕ್ಕೆ ಬಹಳ ಸಂತೋಷ ಎಂದ ಅವರು, ರಕ್ಷಣೆ ನೀಡುವುದು ಸರ್ಕಾರದ ಕೆಲಸ. ಪೊಲೀಸ್ ಇಲಾಖೆಯಲ್ಲಿ ಉತ್ತಮ ಅಧಿಕಾರಿಗಳಿದ್ದಾರೆ. ಅವರಿಗೆ ಅವರದೇ ಆದ ಘನತೆ ಇದೆ. ಅವರು ಸೂಕ್ತ ರಕ್ಷಣೆ ನೀಡುತ್ತಾರೆ. ಯುವತಿ ಪೋಷಕರು ಯಾರ ಬಳಿ ಇದ್ದಾರೆ ಅಂತಾ ನನಗೆ ಗೊತ್ತಿಲ್ಲ. ಅದು ಆ ಯುವತಿಗೇ ಗೊತ್ತು. ನಾನು ಅದನ್ನು ಯಾಕೆ ಟ್ರ್ಯಾಕ್ ಮಾಡಲಿ ಎಂದರು.
ತಮಿಳುನಾಡು ಚುನಾವಣೆ ಪ್ರಚಾರದ ಬಗ್ಗೆ ಮಾತನಾಡಿದ ಅವರು, ನನ್ನ ಕ್ಷೇತ್ರದ ಅಕ್ಕ ಪಕ್ಕದಲ್ಲಿ ತಮಿಳುನಾಡಿನ ಕೇಲವು ಭಾಗಗಳಿದ್ದು, ನಮ್ಮ ಪಕ್ಷದ ಸ್ನೇಹಿತರು ಅಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದು, ಅವರ ಪರವಾಗಿ ಪ್ರಚಾರ ಮಾಡಲು ನಾನು ಹೋಗುತ್ತಿದ್ದೇನೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.