Advertisement

ಲಂಚ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ: ಪುಟ್ಟರಂಗ ಶೆಟ್ಟಿ

01:25 AM Jan 11, 2019 | Team Udayavani |

ಬೆಂಗಳೂರು: ತಮ್ಮ ಕಚೇರಿಯ ಟೈಪಿಸ್ಟ್‌ ಲಂಚದ ಹಣ ಪಡೆದಿರುವ ಪ್ರಕರಣದಲ್ಲಿ ತಮ್ಮ ಪಾತ್ರ ಏನೂ ಇಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಪುಟ್ಟರಂಗ ಶೆಟ್ಟಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ವಿವರಣೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಗುರುವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿ ಪುಟ್ಟರಂಗ ಶೆಟ್ಟಿ ವಿವರಣೆ ನೀಡಿದ್ದು, ಮೋಹನ್‌ ಕುಮಾರ್‌ ಹಣ ಪಡೆದಿರುವುದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಯಾವುದೇ ಹಣಕಾಸಿನ ವ್ಯವಹಾರ ಮಾಡುವ ಬಗ್ಗೆ ನಾನು ಮಾತುಕತೆಯೂ ನಡೆಸಿಲ್ಲ. ಯಾರಿಂದಲೂ ಹಣಕ್ಕೆ ಬೇಡಿಕೆ ಇಟ್ಟಿಲ್ಲ ಎಂದು ವಿವರಣೆ ನೀಡಿದ್ದಾರೆ ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next