Advertisement
ಕನ್ನಡ ರಾಜ್ಯೋತ್ಸವ ನಿಮಿತ್ತ, ರಾಜ್ಯದ ಜನತೆ ಉದ್ದೇಶಿಸಿ ಆಕಾಶವಾಣಿಯಲ್ಲಿ ಭಾಷಣ ಮಾಡಿದರು. ನಾಡಿನ ನೆಲ, ಜಲ, ಭಾಷೆಗೆ ಸಂಬಂಧಿಸಿದ ಪ್ರಶ್ನೆ ಬಂದಾಗ ನಮ್ಮೆಲ್ಲರದ್ದೂ ಒಂದೇ ಪಕ್ಷ ಎಂದು ಹೇಳಿದ್ದಾರೆ.
Related Articles
ಹಿಂದಿ ಭಾಷೆಗೆ ನಮ್ಮ ವಿರೋಧವಿಲ್ಲ. ಆದರೆ, ಕನ್ನಡದ ಬೆಲೆ ತೆತ್ತು ಬೇರೆ ಭಾಷೆಗಳ ಹೇರಿಕೆಯನ್ನು ನಾವು ಒಪ್ಪುವುದಿಲ್ಲ. ಮೆಟ್ರೋ ರೈಲ್ವೆ ನಿಲ್ದಾಣಗಳಲ್ಲಿ ಹಿಂದಿ ಭಾಷೆ ಹೇರಿಕೆ ವಿರುದಟಛಿ ಕನ್ನಡ ಸಂಘಟನಗೆಳು ದನಿ ಎತ್ತಿದಾಗ ಸ್ಪಂದಿಸಿ, ಕೇಂದ್ರ ಸರ್ಕಾರದೊಂದಿಗೆ ವ್ಯವಹರಿಸಿ ಹಿಂದಿ ಫಲಕಗಳನ್ನು ತೆರವುಗೊಳಿಸಲಾಯಿತು ಎಂದು ಹೇಳಿದರು.
ಇಂದು ಕನ್ನಡ ಭಾಷೆ ಅಷ್ಟೇ ಅಲ್ಲ, ಎಲ್ಲಾ ಪ್ರಾದೇಶಿಕ ಭಾಷೆಗಳು ಬಹುದೊಡ್ಡ ಆತಂಕ ಎದುರಿಸುತ್ತಿವೆ.
Advertisement
ಇತ್ತೀಚೆಗೆ ಸುಪ್ರೀಂಕೋರ್ಟ್ ಕೂಡ ಮಗು ಯಾವ ಭಾಷೆಯಲ್ಲಿ ಕಲಿಯಬೇಕೆಂಬ ತೀರ್ಮಾನ ಪಾಲಕರಿಗೆ ಸೇರಿದ್ದು ಎಂದು ಹೇಳಿದೆ. ಇದು ಇಡೀ ಸಮಾಜಕ್ಕೆ ಬಂದಿರುವ ದೊಡ್ಡ ಕುತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸುವ ಅಗತ್ಯವಿದೆ. ಅದಕ್ಕಾಗಿ ಸಂವಿಧಾನಕ್ಕೆ ತಿದ್ದುಪಡಿ ತರುವ ಅಗತ್ಯವಿದ್ದು, ಈ ಕುರಿತು ಪ್ರಧಾನಮಂತ್ರಿಗೆ ಎರಡು ಬಾರಿ ಪತ್ರ ಬರೆದಿದ್ದು, ಪ್ರಧಾನಿಯಿಂದ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಹೇಳಿದರು.
ಶಿಕ್ಷಕರಿಗೆ ತರಬೇತಿ: ಕನ್ನಡ ಮಾಧ್ಯಮದಲ್ಲಿ ಅಧ್ಯಯನ ಮಾಡಿದವರು ವಿಜ್ಞಾನಿಗಳು, ರಾಜಕಾರಣಿಗಳು ಹಾಗೂ ಉನ್ನತ ಹುದ್ದೆಯ ಅಧಿಕಾರಿಗಳಾಗಿದ್ದಾರೆ. ಆದ್ದರಿಂದ ಕನ್ನಡ ಮಾಧ್ಯಮದಲ್ಲಿ ಕಲಿತರೆ ಅವಕಾಶ ಇಲ್ಲ ಎನ್ನುವುದು ಸರಿಯಲ್ಲ. ಅಲ್ಲದೇ, ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಭಾಷೆಯನ್ನು ಒಂದು ವಿಷಯವಾಗಿ ಬೊಧಿಸಲು 5,000 ಶಿಕ್ಷಕರಿಗೆ ದೀರ್ಘಾವಧಿ ತರಬೇತಿ ನೀಡಿ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಹೇಳಿದರು.
ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ಧ್ವಜದ ಅಗತ್ಯವಿದೆ ಎಂದು ಸರ್ಕಾರ ಈಗಾಗಲೇ ಮನಗಂಡಿದೆ. ಈ ಕುರಿತು ಕಾನೂನಿನ ಸಾಧಕ-ಬಾಧಕ ಕುರಿತು ಅಧ್ಯಯನ ನಡೆಸಲು ಸಮಿತಿ ರಚಿಸಲಾಗಿದೆ. ಸಮಿತಿ ವರದಿ ಬಂದ ಕೂಡಲೇ ರಾಜ್ಯ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ.– ಸಿದ್ದರಾಮಯ್ಯ, ಮುಖ್ಯಮಂತ್ರಿ