ಬೆಂಗಳೂರು: ರಾಜ್ಯ ಸರ್ಕಾರ ಸರ್ಕಾರಿ ಕಾರ್ಯಕ್ರಮವಾಗಿ ಟಿಪ್ಪು ಜಯಂತಿ ಆಚರಣೆ ಮಾಡುತ್ತಿರುವ ವಿರುದ್ಧ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಸಮರ ಮುಂದುವರಿಸಿದ್ದು, ನನ್ನ ಹೆಸರು ಯಾವುದೇ ಕಾರಣಕ್ಕೆ ಆಮಂತ್ರಣ ಪತ್ರಿಕೆಯಲ್ಲಿ ಹಾಕಬೇಡಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.
ನವೆಂಬರ್ 10 ರಂದು ನಡೆಯುವ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರದ ಭಾಗವಾಗಿ ನನ್ನ ಹೆಸರನ್ನು ಉತ್ತರ ಕನ್ನಡದಲ್ಲಿ ನಡೆಯುವ ಕಾರ್ಯಕ್ರಮದಲ್ಲಾಗಲಿ, ರಾಜ್ಯದ ಇತರ ಭಾಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಮೂದಿಸಬೇಡಿ ಎಂದು ಆಪ್ತ ಸಹಾಯಕ ರಮೇಶ್ ಮೂಲಕ ಪತ್ರ ಬರೆದಿದ್ದಾರೆ.
ಕಳೆದ ವರ್ಷವೂ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಅನಂತ್ ಕುಮಾರ್ ಹೆಗಡೆ ತೀವ್ರ ವಿರೋಧ ವ್ಯಕ್ತ ಪಡಿಸಿದ್ದರು.
ಬಿಜೆಪಿ ಅಧಿಕಾರಕ್ಕೆ ಬಂದರೆ ಟಿಪ್ಪು ಜಯಂತಿ ಬ್ಯಾನ್
ಹುಬ್ಬಳ್ಳಿಯಲ್ಲಿ ಮಾತನಾಡಿದ ಸಂಸದ ಪ್ರಹ್ಲಾದ್ ಜೋಷಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಟಿಪ್ಪು ಜಯಂತಿಯನ್ನು ಬ್ಯಾನ್ ಮಾಡುವುದಾಗಿ ಘೋಷಿಸಿದ್ದಾರೆ.