ಮಲಪ್ಪುರಂ: ಕೇರಳ ಕಾಂಗ್ರೆಸ್ ಘಟಕದ ತೀವ್ರ ಅಸಮಾಧಾನದ ನಡುವೆಯೂ ತಮ್ಮ “ಮಲಬಾರ್ ಪ್ರವಾಸ’ವನ್ನು ಮುಂದುವರಿಸಿರುವ ಕಾಂಗ್ರೆಸ್ ಸಂಸದ ಶಶಿ ತರೂರ್, “ನಾನು ಯಾರಿಗೂ ಹೆದರುವುದಿಲ್ಲ, ನನ್ನನ್ನು ನೋಡಿ ಇತರರು ಹೆದರಬೇಕಾಗಿಯೂ ಇಲ್ಲ’ ಎಂದು ಹೇಳುವ ಮೂಲಕ ತಮ್ಮ ಪಕ್ಷದ ನಾಯಕರಿಗೇ ಟಾಂಗ್ ನೀಡಿದ್ದಾರೆ.
ಈ ಪ್ರವಾಸಕ್ಕೆ ಪಕ್ಷದೊಳಗೆ ತೀವ್ರ ವಿರೋಧವಿದ್ದರೂ, ತರೂರ್‌ಗೆ ಭಾರೀ ಜನಬೆಂಬಲ ವ್ಯಕ್ತವಾಗುತ್ತಿದೆ. ಮಂಗಳವಾರ ತರೂರ್ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮಿತ್ರಪಕ್ಷ ಐಯುಎಂಎಲ್ ಹಿರಿಯ ನಾಯಕರನ್ನೂ ಭೇಟಿಯಾಗಿದ್ದಾರೆ.
ಇನ್ನೊಂದೆಡೆ, ತರೂರ್ ಪ್ರವಾಸದ ಕುರಿತು ಪ್ರತಿಕ್ರಿಯಿಸಿರುವ ಕೇರಳ ಪ್ರತಿಪಕ್ಷ ನಾಯಕ ವಿ.ಡಿ.ಸತೀಶನ್, “ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಚಟುವಟಿಕೆಗಳಿಗೆ ಅವಕಾಶವಿಲ್ಲ. ಅಂಥ ಕ್ರಮಗಳನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ’ ಎಂದು ಎಚ್ಚರಿಸಿದ್ದಾರೆ.
ಇದೇ ವೇಳೆ, ಯಾತ್ರೆಯಲ್ಲಿ ಭಾಗವಹಿಸುತ್ತಿರುವ ಪ್ರಮುಖ ನಟ-ನಟಿಯರಿಗೆ ಹಣ ಪಾವತಿ ಮಾಡಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಅದಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್ ಸೂಕ್ತ ಸಾಕ್ಷ್ಯಗಳನ್ನು ನೀಡಿದೆ ಎಂದಿದೆ.