Advertisement

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

11:58 PM Nov 21, 2024 | Team Udayavani |

ಮೈಸೂರು: ಸಚಿವ ಸಂಪುಟ ಪುನಾರಚನೆ ಬಗ್ಗೆ ನನಗೇನು ಗೊತ್ತಿಲ್ಲ. ಅದು ನಮ್ಮನ್ನು ಕೇಳಿ ಮಾಡುವ ಕೆಲಸವಲ್ಲ; ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು. ಹೀಗಾಗಿ ಸಚಿವ ಜಮೀರ್‌ ಅಹಮದ್‌ ಖಾನ್‌ ಬದಲಾವಣೆ ವಿಚಾರವೂ ನನಗೆ ಗೊತ್ತಿಲ್ಲ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ತಿಳಿಸಿದರು.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ಮಂಡಳಿ ನೀಡಿರುವ ನೋಟಿಸ್‌ ವಾಪಸ್‌ ಪಡೆಯಬೇಕೆಂದು ಸಿಎಂ ಸೂಚನೆ ನೀಡಿದ್ದಾ ರೆ. ಆದರೂ ವಿಪಕ್ಷ ನಾಯಕರು ರಾಜಕೀಯಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದರು. ಮತದಾನೋತ್ತರ ಸಮೀಕ್ಷೆಗಳು ಎಲ್ಲ ಸಂದರ್ಭದಲ್ಲೂ ನಿಜವಾಗುವುದಿಲ್ಲ. ನಾನು ಮಹಾರಾಷ್ಟ್ರ ಉಸ್ತುವಾರಿ ವಹಿಸಿದ್ದು, ಅಲ್ಲಿ ಬೇರೆಯೇ ವಾತಾವರಣವಿದೆ ಎಂದರು.

ರಾಜ್ಯದಲ್ಲಿ ಬಿಪಿಎಲ್‌ ಕಾರ್ಡ್‌ಗಳ ಬದಲಾವಣೆ ವಿಚಾರದಲ್ಲಿ ಬಿಜೆಪಿ ನಾಯಕರು ಮೊದಲು ನಮ್ಮನ್ನು ಕೇಳುವ ಬದಲು ಕೇಂದ್ರ ಸರಕಾರವನ್ನು ಕೇಳಲಿ. ಕೇಂದ್ರದವರು 5.8 ಕೋಟಿ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡಿದ್ದಾರೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next