Advertisement

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

12:20 AM May 04, 2024 | Team Udayavani |

ಬೆಂಗಳೂರು: ಪ್ರಜ್ವಲ್‌ ರೇವಣ್ಣ ವಿರುದ್ಧ ಲುಕ್‌ಔಟ್‌ ನೋಟಿಸ್‌ ಹೊರಡಿಸಲಾಗಿದೆ. ಅದರಂತೆ ಎಲ್ಲ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಿಗೆ ಅವರ ಫೋಟೋಸಹಿತ ನೋಟಿಸ್‌ ಕಳುಹಿಸಲಾಗಿದೆ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ತಿಳಿಸಿದರು.

Advertisement

ನಿಯಮಾನುಸಾರವೇ ಈ ಲುಕ್‌ಔಟ್‌ ನೋಟಿಸ್‌ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ ಡಾ| ಪರಮೇಶ್ವರ್‌, ಶಾಸಕ ಎಚ್‌.ಡಿ. ರೇವಣ್ಣ ಅವರ ಮನೆ ಮೇಲೆ ಎಸ್‌ಐಟಿ ದಾಳಿ ನಡೆಸಿರುವುದು ಗೊತ್ತಿಲ್ಲ. ಪ್ರಜ್ವಲ್‌ ರೇವಣ್ಣ ದುಬಾೖಗೆ ಹೋಗಿರುವುದೂ ನಮಗೆ ಗೊತ್ತಿಲ್ಲ. ಜರ್ಮನಿಗೆ ಹೋಗಿರುವ ಬಗ್ಗೆ ಮಾಹಿತಿ ಇದೆ.

ಜರ್ಮನಿಯಿಂದ ಕರೆತರಲು ಕೇಂದ್ರದ ನೆರವು ಬೇಕು. 2ನೇ ನೋಟಿಸ್‌ಗೂ ಸ್ಪಂದಿಸದಿದ್ದರೆ ಮುಂದಿನ ತೀರ್ಮಾನಗಳನ್ನು ಎಸ್‌ಐಟಿ ಕೈಗೊಳ್ಳುತ್ತದೆ ಎಂದು ತಿಳಿಸಿದರು.

ಸದಾಶಿವ ನಗರದ ತಮ್ಮ ನಿವಾಸದ ಬಳಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಟೀಕೆಗಳಿಗೆ ನಾನು ಉತ್ತರ ಕೊಡುವುದಿಲ್ಲ. ನನಗೆ ಒಂದಷ್ಟು ಜವಾಬ್ದಾರಿಗಳಿವೆ ಎಂದರು.

ಮ್ಯಾಜಿಸ್ಟ್ರೇಟ್‌ ಎದುರು ಸಂತ್ರಸ್ತೆ ಹೇಳಿಕೆ
ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆಯೊಬ್ಬರಿಂದ ನ್ಯಾಯಾಧೀಶರ ಮುಂದೆ ಹೇಳಿಕೆ ಕೊಡಿಸಲಾಗಿದೆ ಎಂದು ಮಾಹಿತಿ ನೀಡಿದ ಡಾ|ಪರಮೇಶ್ವರ್‌, ಗುರುವಾರವಷ್ಟೇ (ಮೇ 2) ಸಂತ್ರಸ್ತೆಯೊಬ್ಬರು ದೂರು ನೀಡಿದ್ದಾರೆ. ಎಸ್‌ಐಟಿಯವರು ಒತ್ತಾಯಪೂರ್ವಕವಾಗಿ ಆಕೆಯಿಂದ ಹೇಳಿಕೆ ಪಡೆದುಕೊಂಡಿದ್ದಾರೆ ಅಂತ ಯಾರಿಂದಲೂ ಆರೋಪ ಬರಬಾರದು. ಹೀಗಾಗಿ ಮ್ಯಾಜಿಸ್ಟ್ರೇಟ್‌ ಮುಂದೆಯೇ ಸೆಕ್ಷನ್‌ 164ರ ಅಡಿ ಹೇಳಿಕೆ ಕೊಡಿಸಲಾಗಿದೆಂದು ಸ್ಪಷ್ಟಪಡಿಸಿದರು.

Advertisement

ಪ್ರಜ್ವಲ್‌ ರೇವಣ್ಣ ಅವರಿಗೆ ಸೆಕ್ಷನ್‌ 41ಎ ಅಡಿ ನೋಟಿಸ್‌ ನೀಡಲಾಗಿದೆ. ಪ್ರಜ್ವಲ್‌ ಪರ ವಕೀಲರು ಕಾಲಾವಕಾಶ ಕೇಳಿದ್ದಾ ರೆ. ಇದಕ್ಕೆ ಅವಕಾಶವಿಲ್ಲ ಎಂಬುದನ್ನು ತಿಳಿಸಿದ್ದೇವೆ. ರೇವಣ್ಣ ಅವರಿಗೂ ಇದೇ ನಿಯಮದಡಿ ನೋಟಿಸ್‌ ನೀಡಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next