Advertisement
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಉಲ್ಲಂ ಸುವವರ ವಿರುದ್ಧ ಕ್ರಮ ತೆಗೆದುಕೊಂಡಿದ್ದೇವೆ. ಸಿದ್ದರಾಮಯ್ಯ ಅವರ ಕಾಲದಲ್ಲಿ ಏನಾಗಿದೆ, ಎಷ್ಟು ಸಾವಾಗಿದೆ ಎಂಬುದರ ಬಗ್ಗೆ ಸದನದಲ್ಲಿ ಹೇಳಿದ್ದೇನೆ. ಅವರು ಪಿಎಫ್ಐ, ಎಸ್‌ಡಿಪಿಐ ವಿರುದ್ಧದ ಪ್ರಕರಣ ವಾಪಾಸ್ ಪಡೆದವರು. ಅವರಿಂದ ನನಗೆ ಸರ್ಟಿಫಿಕೆಟ್ ಬೇಕಿಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.
Related Articles
ನಗರದ ಹಳೇಗುಡ್ಡದಹಳ್ಳಿಯಲ್ಲಿ ಇತ್ತೀಚೆಗೆ ನಡೆದ ಚಂದ್ರು ಎಂಬ ಯುವಕನ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಆದೇಶಿಸಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
Advertisement
ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಚಂದ್ರು ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ. ಈ ಹತ್ಯೆಗೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಿ ಸತ್ಯವನ್ನು ಬಯಲಿಗೆ ಎಳೆಯಬೇಕು ಹಾಗೂ ಹಂತಕರನ್ನು ಶಿಕ್ಷೆಗೆ ಒಳಪಡಿಸಬೇಕು. ಈ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.
ಭಾಷೆ ವಿಚಾರಕ್ಕೆ ಚಂದ್ರು ಕೊಲೆಯಾಗಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಭಾಷೆ ವಿಚಾರದ ಬಗ್ಗೆ ನಾನು ಮಾತನಾಡುವುದಿಲ್ಲ. ತನಿಖೆ ನಡೆಯುತ್ತಿರುವುದರಿಂದ ಈ ಹಂತದಲ್ಲಿ ನಾನು ಹೆಚ್ಚು ಮಾತನಾಡುವುದಿಲ್ಲ. ಅಮಾನುಷವಾಗಿ ಕೊಲೆ ಮಾಡಲಾಗಿದೆ. ನಮ್ಮ ಪೊಲೀಸ್ ವಿಭಾಗದ ಮೇಲೆ ನಂಬಿಕೆ ಅಥವಾ ಅಪನಂಬಿಕೆ ವಿಚಾರ ಇಲ್ಲಿ ಬರುವುದಿಲ್ಲ. ಸಿಐಡಿಯೂ ನಮ್ಮದೇ ಪೊಲೀಸರ ಮತ್ತೂಂದು ವಿಭಾಗವಾಗಿದೆ ಎಂದು ಹೇಳಿದರು.