Advertisement
ರಾಜ್ಯದಲ್ಲಿ ಒಕ್ಕಲಿಗರ ನಾಯಕತ್ವಕ್ಕಾಗಿ ಇಂತಹ ಪ್ರಕರಣಗಳು ಆಚೆ ಬರುತ್ತಿವೆ ಎಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪೆನ್‌ಡ್ರೈವ್ ಪ್ರಕರಣ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, ಇದೆ ಲ್ಲವೂ ಬಿಜೆಪಿ ಸೃಷ್ಟಿಸಿರುವ ಚರ್ಚೆಗಳು. ನನಗೆ ಯಾವುದೇ ನಾಯಕತ್ವ ಬೇಡ. 4 ವರ್ಷಗಳ ಹಿಂದೆಯೇ ಕಾಂಗ್ರೆಸ್ ನನ್ನನ್ನು ಪಕ್ಷದ ರಾಜ್ಯಾಧ್ಯಕ್ಷನಾಗಿ ಮಾಡಿದೆ. ಬಿಜೆಪಿಗರು ಗಳಿಗೆಗೊಂದು ಮಾತನಾಡುತ್ತಿದ್ದಾರೆ. ನಾನು ಒಕ್ಕಲಿಗನಾಗಿ ಹುಟ್ಟಿದ್ದೇನೆ. ಆ ಸಮಾಜಕ್ಕೆ ರಕ್ಷಣೆ ಕೊಡುವ ಜವಾಬ್ದಾರಿ ಇದೆ. ಈ ಸಮುದಾಯದ ಜನರ ಸ್ವಾಭಿ ಮಾನ, ಗೌರವ ಉಳಿಸಲು ನಾನು ಅವರ ಸೇವೆ ಮಾಡುತ್ತೇನೆ. ಅದು ನನ್ನ ಧರ್ಮ ಎಂದರು.
ಪೆನ್‌ಡ್ರೈವ್ ಅವರ ಕುಟುಂಬದ ವಿಚಾರ. ಆದರೆ ಕುಮಾರಸ್ವಾಮಿ ಮಾತು ಆಗಾಗ್ಗೆ ಬದಲಾಗುತ್ತಲೇ ಬಂದಿದೆ. ಬೇಕಿದ್ದರೆ ಕಳೆದ ವಿಧಾನಸಭೆ ಚುನಾವಣೆ ಯಿಂದ ಈಚೆಗೆ ಅವರ ಕುಟುಂಬ ಸದಸ್ಯರ ಹೇಳಿಕೆಗಳನ್ನು ನೋಡಿಕೊಂಡು ಬನ್ನಿ. ಈಗ ಪೆನ್‌ಡ್ರೈವ್ ಪ್ರಕರಣದಲ್ಲೂ ಕುಮಾರಸ್ವಾಮಿ ಗಂಟೆಗೊಂದು, ಗಳಿಗೆಗೊಂದು ಹೇಳಿಕೆ ನೀಡುತ್ತಿದ್ದಾರೆ. ನಿಲುವು ಬದಲಿಸುತ್ತಿದ್ದಾರೆ. ಪೆನ್‌ಡ್ರೈವ್ ವಿಚಾರದಲ್ಲಿ ಕುಮಾರಸ್ವಾಮಿ ನಿಲುವು ಬದಲಿಸುತ್ತಿರುವುದೇಕೆ ಎಂದು ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ. ಮೇ 7ರ ನಂತರ ಈ ಪ್ರಕರಣ ಎಲ್ಲಿಗೆ ಹೋಗುತ್ತೆ ಎಂದು ಎಲ್ಲರಿಗೂ ಗೊತ್ತು ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಸಿಎಂ, ಮೇ 7ರ ವರೆಗೆ ಯಾಕೆ ಕಾಯಬೇಕು? ಇದರ ಮೂಲ ಏನು? ಇದರ ಹಿನ್ನೆಲೆ ಯಾರು ಎಂದು ನಾವು ಬಿಚ್ಚಿ ಇಡಬೇಕಾ? ಇದು ಅವರ ಕುಟುಂಬದ ಆಂತರಿಕ ವಿಚಾರ. ಈ ಬಗ್ಗೆ ಮಾಧ್ಯಮದವರು ವಿಶ್ಲೇಷಣೆ ಮಾಡಿದ್ದಾರೆ. ಕುಮಾರಸ್ವಾಮಿ ಅವರೇ, ಉಪ್ಪು ತಿಂದವರು ನೀರು ಕುಡಿಯಬೇಕು, ನಮ್ಮ ಕುಟುಂಬ ಬೇರೆ, ಅವರ ಕುಟುಂಬ ಬೇರೆ ಎಂದು ಹೇಳಿದ್ದಾರೆ. ಹಿಂದೆ ನಮ್ಮ ಕುಟುಂಬದವರಿಗೆ ಟಿಕೆಟ್ ನೀಡುವುದಿಲ್ಲ ಎಂದು ಹೇಳಿದ್ದೂ ಅವರೇ. ಪ್ರಜ್ವಲ್‌ನಿಂದ ತಪ್ಪಾಗಿದೆ ಕ್ಷಮಿಸಿ ಎಂದು ಕ್ಷಮೆ ಕೇಳಿದ್ದು ಅವರೇ. ಆದರೆ ಕುಮಾರಸ್ವಾಮಿ ಈಗ ತಮ್ಮ ನಿಲುವು ಬದಲಿಸುತ್ತಿರುವುದೇಕೆ ಎಂದರು.