ಶಿವಮೊಗ್ಗ: ಇತ್ತೀಚೆಗೆ ಬಿಜೆಪಿಯಲ್ಲಿ ನಡೆಯುತ್ತಿರುವ ಬೆಳವಣಿಗೆ, ಶಾಸಕರ ವರ್ತನೆ ನನಗೆ ಬೇಸರ ತರಿಸಿದೆ. ಪಕ್ಷದ ಹಿತೈಷಿಗಳಿಗೆ ಹಿರಿಯರಿಗೆ ಈ ಬೆಳವಣಿಗೆ ಸಮಾಧಾನವಿಲ್ಲ. ಇದು ಬಿಜೆಪಿಯೇನಾ ಎಂಬ ಅನುಮಾನ ಹುಟ್ಟುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, ಕೇವಲ ಮಂತ್ರಿಯಾಗುವ ಸಲುವಾಗಿ ರಾಜಕಾರಣಿಯಾಗುವುದು ಸರಿಯಲ್ಲ. ಈ ರೀತಿ ಸಮಸ್ಯೆಯನ್ನು ಯಾರು ಉಂಟು ಮಾಡುತ್ತಿದ್ದಾರೆ. ಅವರ ಬಗ್ಗೆ ಮುಂದಿನ ದಿನದಲ್ಲಿ ಪಕ್ಷ ಶಿಸ್ತು ಕ್ರಮ ತೆಗೆದುಕೊಳ್ಳಬಹುದು. ಆದರೆ, ನಮ್ಮ ಪಕ್ಷದವರ ಮೇಲೆ ಶಿಸ್ತು ಕ್ರಮ ಜರುಗಿಸುವುದು ಕೂಡ ಸರಿಯಾಗುವುದಿಲ್ಲ ಎಂದರು.
ಸಂಪುಟ ವಿಸ್ತರಣೆ ಸಂಬಂಧ ಅಸಮಾಧಾನ ಇರುವುದು ನಿಜ. ಆದರೆ ಅದನ್ನು ಎಲ್ಲಿ ಸರಿಪಡಿಸಿಕೊಳ್ಳಬೇಕೋ ಅಲ್ಲಿ ಸರಿಪಡಿಸಿಕೊಳ್ಳಬೇಕು. ಅದನ್ನು ಬಿಟ್ಟು ಹಾದಿ ಬೀದಿಯಲ್ಲಿ ಮಾತನಾಡಿದರೆ ಬಗೆಹರಿಯುತ್ತದೆಯೇ ಎಂದು ಪ್ರಶ್ನಿಸಿದರು.
ಇದನ್ನೂ ಓದಿ:ಧಾರವಾಡ ಬೈಪಾಸ್ ನಲ್ಲಿ ಟೆಂಪೋ-ಲಾರಿ ನಡುವೆ ಭೀಕರ ಅಪಘಾತ: ಹತ್ತಕ್ಕೂ ಹೆಚ್ಚು ಜನರ ದುರ್ಮರಣ
ಯಡಿಯೂರಪ್ಪ ಅವರ ಮೇಲೆ ಆರೋಪ ಮಾಡುವುದು, ಅವರ ಕುಟುಂಬದವರ ಮೇಲೆ ಆರೋಪ ಮಾಡುವುದು ಸರಿಯಲ್ಲ. ಈ ಎಲ್ಲಾ ಬೆಳವಣಿಗೆಯನ್ನು ಹೈಕಮಾಂಡ್ ಗಮನಿಸುತ್ತಿದೆ. ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೆ ಎಂದರು.