Advertisement

ಚುನಾವಣೆಗೆ ಸ್ಪರ್ಧಿಸಲು ನಾನು ಅರ್ಜಿ ಹಾಕಿದ್ದೇನೆ: ಕಾಗೋಡು ತಿಮ್ಮಪ್ಪ

07:41 PM Nov 13, 2022 | Team Udayavani |

ಸಾಗರ: ಕಾಂಗ್ರೆಸ್ ಪಕ್ಷ ಈ ಬಾರಿ ಅಧಿಕಾರಕ್ಕೆ ತರಲು ಎಲ್ಲರೂ ಸೇರಿ ವ್ಯವಸ್ಥಿತ ಸಂಘಟನೆ ಮಾಡಲಾಗುತ್ತಿದೆ. ಚುನಾವಣಾ ಉಮೇದುವಾರಿಕೆಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿ ಪಕ್ಷದ ನಿಯಮದಂತೆ ನಾನು ಹಾಗೂ ರಾಜನಂದಿನಿ ಅರ್ಜಿ ಸಲ್ಲಿಸಿದ್ದೇವೆ. ಪಕ್ಷ ಬಯಸಿದರೆ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.

Advertisement

ತಾಲೂಕಿನ ತ್ಯಾಗರ್ತಿಯ ವಿವೇಕಾನಂದ ಪ್ರೌಢಶಾಲಾ ಮೈದಾನದಲ್ಲಿ ನಡೆಯುತ್ತಿರುವ ತ್ಯಾಗರ್ತಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ವೀಕ್ಷಿಸಲು ಭಾನುವಾರ ಆಗಮಿಸಿದ್ದ ಅವರು ಪತ್ರಿಕೆಯೊಂದಿಗೆ ಮಾತನಾಡಿ, ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಗೆಲ್ಲಲು ಉತ್ತಮ ವಾತಾವಣ ಇದೆ. ಅದರ ಪ್ರಯೋಜನ ಪಡೆದುಕೊಳ್ಳಬೇಕು. ಕ್ಷೇತ್ರದಲ್ಲಿ ಅನೇಕ ಸಮಸ್ಯೆಗಳಿವೆ. ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ಹೋರಾಟ ಮಾಡಬೇಕಾಗಿದೆ. ಚುನಾವಣಾ ಸಿದ್ಧತೆಗಾಗಿ ಕ್ಷೇತ್ರಾದ್ಯಂತ ಸಂಘಟನೆಗೆ ಒತ್ತು ನೀಡಲಾಗುತ್ತಿದೆ ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ. ರಾಜನಂದಿನಿ ಮಾತನಾಡಿ, ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಚುನಾವಣೆಗೆ ಅಭ್ಯರ್ಥಿಯಾಗಲು ಯಾರು ಬೇಕಾದರೂ ಅರ್ಜಿ ಸಲ್ಲಿಸಬಹುದು. ಆದರೆ ಅಂತಿಮ ತೀರ್ಮಾನ ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ. ನಮ್ಮ ಪಕ್ಷದ ಹಿರಿಯರಾದ ಕಾಗೋಡು ತಿಮ್ಮಪ್ಪನವರೇ ಅಭ್ಯರ್ಥಿಯಾಗಬೇಕೆಂಬುದು ನಮ್ಮೆಲ್ಲರ ಆಕಾಂಕ್ಷೆಯಾಗಿದೆ. ತಾಲೂಕಿನಲ್ಲಿ ಅನೇಕ ಕೆಲಸಗಳು ಮತ್ತು ಹೋರಾಟಗಳು ಬಾಕಿ ಇದೆ. ಇನ್ನೂ ಅನೇಕ ಬಡವರಿಗೆ ಭೂಮಿ ನೀಡುವ ಕೆಲಸ ಆಗಬೇಕು. ಆದ್ದರಿಂದ ಒಮ್ಮತದ ಅಭ್ಯರ್ಥಿಯಾಗಿ ಕಾಗೋಡು ತಿಮ್ಮಪ್ಪ ಅವರನ್ನು ಬೆಂಬಲಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಬರೂರು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಅನ್ನಪೂರ್ಣ ಪುಟ್ಟಪ್ಪ, ತಾಪಂ ಮಾಜಿ ಅಧ್ಯಕ್ಷ ಟಿ.ಕೆ.ಹನುಮಂತಪ್ಪ, ತ್ಯಾಗರ್ತಿ ಗ್ರಾಪಂ ಸದಸ್ಯರಾದ ಎಚ್. ಗಿರೀಶ್, ಪ್ರಮುಖರಾದ ಟಿ.ಕೆ. ಕೃಷ್ಣಪ್ಪ, ಕಿರಣ್ ದೊಡ್ಡಮನೆ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next