Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕುಮಾರಸ್ವಾಮಿ ಪೆನ್ ಡ್ರೈವ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಪೆನ್ ಡ್ರೈವ್ ಬಿಡುಗಡೆ ಮಾಡಲು ಯಾರು ಬೇಡ ಅಂದವರು. ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ಸವಾಲೆಸೆದರು.
Related Articles
Advertisement
ವರ್ಗಾವಣೆಯಲ್ಲಿ ಭ್ರಷ್ಟಾಚಾರ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದು ಸತ್ಯಕ್ಕೆ ದೂರವಾದುದು, ಸರಕಾರ ಅಧಿಕಾರಕ್ಕೆ ಬಂದು ಕೇವಲ ಒಂದೂವರೆ ತಿಂಗಳಾಗಿದೆ. ಕಳೆದ ಸರಕಾರದ ಅವಧಿಯಲ್ಲಿ ಹೇಗೆ ವರ್ಗಾವಣೆ ಆಗಿದೆಯೋ ಅದೇ ರೀತಿ ವರ್ಗಾವಣೆ ನಡೆಯುತ್ತಿದೆ ಎಂದರು.
ರಾಜ್ಯದಲ್ಲಿ ರೈತ ಆತ್ಮಹತ್ಯೆ ಪ್ರಕರಣ ವಿಚಾರಕ್ಕೆ ಮಾತನಾಡಿದ ಅವರು, ರಾಜ್ಯ ಸರಕಾರ ರೈತರಿಗೆ 5 ಲಕ್ಷ ರೂ ಬಡ್ಡಿ ರಹಿತ ಸಾಲ ಕೊಡುತ್ತಿದೆ. ಆ ಮೂಲಕ ರೈತರಿಗೆ ಧೈರ್ಯ ತುಂಬುತ್ತಿದೆ. ಹಾವೇರಿ ಜಿಲ್ಲೆಯಲ್ಲಿ ಕೇವಲ 6 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, 18 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಸದನದಲ್ಲಿ ತಪ್ಪು ಮಾಹಿತಿ ಕೊಟ್ಟಿದ್ದಾರೆ ಎಂದರು.
ರಾಜ್ಯದಲ್ಲಿ 1,500 ಕೋಟಿ ರೂ ಬೆಳೆ ವಿಮೆಗೆ ಮೀಸಲಿಡಲಾಗಿದೆ. ಕೃಷಿ ಇಲಾಖೆಯಿಂದ 900 ಕೋಟಿ, ತೋಟಗಾರಿಕೆ ಇಲಾಖೆಯಿಂದ 600 ಕೋಟಿ ಮೀಸಲು ಇಡಲಾಗಿದೆ. ಬೆಳೆ ವಿಮೆಗೆ 6 ಲಕ್ಷ ಮಂದಿ ಅರ್ಜಿ ಸಲ್ಲಿಸಿದ್ದಾರೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದರು.