Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಪ್ರಕರಣದಲ್ಲಿ ಶ್ರೀಕೃಷ್ಣ ಎಂಬಾತನ ಬಂಧನವಾಗಿದೆ. ಡ್ರಗ್ ಜತೆಗೆ ಹ್ಯಾಕಿಂಗ್ ಸಹ ಮಾಡುತ್ತಿದ್ದ. ನಂತರ 2020 ರಲ್ಲಿ ನಮ್ಮ ಸರ್ಕಾರ ಆತನನ್ನು ಬಂಧನ ಮಾಡಿದೆ. ನಂತರ ವಿಚಾರಣೆ ವೇಳೆ ಶ್ರೀಕಿ ಹ್ಯಾಕರ್ ಎಂದು ಗೊತ್ತಾಗುತ್ತದೆ. ಡಾರ್ಕ್ ವೆಬ್ ಸೇರಿ ಬೇರೆ ಹಣಕಾಸು ಸಂಸ್ಥೆಗಳ ವೆಬ್ ಸೈಟ್ ಹ್ಯಾಕ್ ಮಾಡಿದ್ದು ಗೊತ್ತಾಗುತ್ತದೆ. ಮೂರು ಕೇಸ್ ಆತನ ಮೇಲಿದೆ. ಮನಿ ಲಾಂಡರಿಂಗ್, ಹ್ಯಾಕಿಂಗ್, ಡ್ರಗ್ ಕೇಸ್ ನಲ್ಲಿ ಆತ ಶಾಮೀಲಾಗಿದ್ದಾನೆ. 2018 ರ ಫೆಬ್ರವರಿಯಲ್ಲಿ ಶ್ರೀಕಿ ಮೇಲೆ ಕೇಸ್ ಬಂದಿತ್ತು. ಆತನ ಜತೆ ಇದ್ದ ಐದಾರು ಜನರ ಬಂಧನವಾಗುತ್ತದೆ. ಆದರೆ ಶ್ರೀಕಿ ಬಂಧನ ಮಾಡಿರಲ್ಲ. ಆಗ ಯಾವ ಸರ್ಕಾರ ಇತ್ತು ಗಮನಿಸಿ. ನಂತರ ಆತನಿಗೆ ಬೇಲ್ ಸಿಗುತ್ತದೆ. ಬೇಲ್ ಸಿಕ್ಕ ಬಳಿಕವೂ ಕರೆಸಿ ವಿಚಾರಣೆ ಮಾಡಲ್ಲ. ಯುಬಿ ಸಿಟಿ ದಾಂಧಲೆ ಪ್ರಕರಣದಲ್ಲಿ ಆತನ ಬಂಧನ ಆಗಿರುತ್ತದೆ. ಆಗಲೇ ಸರಿಯಾಗಿ ವಿಚಾರಣೆ ಮಾಡಿದ್ದಿದ್ದರೆ ಆತನ ಇತರೆ ದುಷ್ಕೃತ್ಯ, ಡ್ರಗ್ ವಿಚಾರ ಬಯಲಿಗೆ ಬರುತ್ತಿತ್ತು ಎಂದರು.
Related Articles
Advertisement
ಸಿದ್ದರಾಮಯ್ಯಗೆ ತಿರುಗೇಟು: ಸಿದ್ದರಾಮಯ್ಯ ಟ್ವೀಟ್ ಮಾಡಿ ಬಿಟ್ ಕಾಯಿನ್ ನಲ್ಲಿ ಪ್ರಭಾವಿಗಳು ಭಾಗಿಯಾಗಿದ್ದಾರೆ, ಅವರ ರಕ್ಷಿಸುವ ಹುನ್ನಾರ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಸಿದ್ದರಾಮಯ್ಯ ಸಾಕ್ಷಿ ಆಧಾರ ಇಟ್ಟು ಮಾತಾಡಬೇಕು. ಸುಮ್ಮನೆ ಆರೋಪ ಮಾಡುವುದು ಸರಿಯಲ್ಲ. ಸಿದ್ದರಾಮಯ್ಯ ಸಾಕ್ಷಿ ಆಧಾರ ಕೊಡಲಿ, ಅದನ್ನೂ ತನಿಖೆ ಮಾಡುತ್ತೇವೆ. ಏನೂ ಇಲ್ಲದೇ ಸೂತ್ರ ಇಲ್ಲದೇ ಪಟ ಬಿಡಲು ಹೋಗಬಾರದು ಎಂದು ಸಿಎಂ ತಿರುಗೇಟು ನೀಡಿದರು.
ಕಾಂಗ್ರೆಸ್ ನವರಿಗೆ ಸೋಲುವ ಭಯ ಇದೆ. ಈಗಿಂದಲೇ ಅನೇಕ ಆರೋಪ ಮಾಡುತ್ತಿದ್ದಾರೆ. ಚುನಾವಣಾ ರಹಿತ ಆರೋಪವನ್ನು ಮಾಡುತ್ತಿದೆ. ಎರಡೂ ಚುನಾವಣೆ ಪ್ರಚಾರ ಮಾಡಿದ್ದೇವೆ. ಎರಡೂ ಕಡೆ ಅಭೂತಪೂರ್ವ ಬೆಂಬಲ ಇದೆ. ಎರಡೂ ಕಡೆ ಗೆಲ್ಲುವ ವಿಶ್ವಾಸ ಇದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.