Advertisement

ಒಂದಲ್ಲಾ ಒಂದು ದಿನ ನಾನು ನಿರಪರಾಧಿ ಎಂದು ಸಾಬೀತಾಗುತ್ತದೆ : ಡಿ.ಕೆ.ಶಿವಕುಮಾರ್

06:41 PM Sep 19, 2022 | Team Udayavani |

ಬೆಂಗಳೂರು: ‘ನನಗೆ ಭಾರತೀಯ ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಸಂಪೂರ್ಣ ನಂಬಿಕೆ ಇದೆ. ಒಂದಲ್ಲಾ ಒಂದು ದಿನ ನಾನು ನಿರಪರಾಧಿ ಎಂದು ಸಾಬೀತಾಗುತ್ತದೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಟ್ವೀಟ್ ಮಾಡಿದ್ದಾರೆ.

Advertisement

”ರಾಜಕೀಯ ಸೇಡು, ಕಿರುಕುಳಕ್ಕೆ ಹೆದರುವವನು ನಾನಲ್ಲ. ಕರ್ನಾಟಕದ ಜನರ ಪರವಾಗಿ ಮಾತನಾಡಿದ್ದಕ್ಕೆ, ನಿರುದ್ಯೋಗ, ಬೆಲೆ ಏರಿಕೆಯಂತಹ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ್ದಕ್ಕಾಗಿ ಈ ಬೆಲೆ ತೆರಬೇಕಾಗಿದೆ.” ಎಂದು ದೆಹಲಿಯ ಇಡಿ ಕಚೇರಿಗೆ ವಿಚಾರಣೆಗಾಗಿ ಹಾಜರಾದ ಬೆನ್ನಲ್ಲೇ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಇಡಿ ಕಚೇರಿಗೆ ಡಿಕೆ ಶಿವಕುಮಾರ್ ಹಾಜರು: ಕಿಡಿ ಕಾರಿದ ಸಹೋದರ

ಅಕ್ರಮ ಹಣ ಸಾಗಣೆ ಪ್ರಕರಣ ಸಂಬಂಧ ಡಿ.ಕೆ.ಶಿವಕುಮಾರ್‌ ಅವರಿಗೆ ಗುರುವಾರ ಜಾರಿ ನಿರ್ದೇಶನಾಲಯ ಸಮನ್ಸ್‌ ಜಾರಿಗೊಳಿಸಿತ್ತು. ಈ ಬಗ್ಗೆ ಸ್ವತಃ ಡಿ.ಕೆ. ಶಿವಕುಮಾರ್‌ ಅವರೇ ಟ್ವಿಟರ್‌ ಮೂಲಕ ಮಾಹಿತಿ ನೀಡಿ”ಕರ್ನಾಟಕದಲ್ಲಿ ವಿಧಾನಸಭೆ ಅಧಿವೇಶನ ನಡೆಯುತ್ತಿರುವಾಗಲೂ ದೆಹಲಿಯಲ್ಲಿ ಇಡಿಯಿಂದ ತಮಗೆ ಸಮನ್ಸ್ ಬಂದಿದೆ” ಎಂದು ಸೆ. 15 ರಂದು ಟ್ವೀಟ್ ಮಾಡಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next