Advertisement

Politics: ನಾನು ರಾಜ್ಯ ರಾಜಕಾರಣಕ್ಕೆ ಬರುವ ವಿಚಾರವೇ ಇಲ್ಲ: ಸಚಿವೆ ಶೋಭಾ ಕರಂದ್ಲಾಜೆ

03:26 PM Oct 23, 2023 | Team Udayavani |

ಮೈಸೂರು: ನಾನು ಕೇಂದ್ರ ಸಚಿವೆಯಾಗಿಯೇ ಸಂತೋಷವಾಗಿದ್ದೇನೆ. ನಾನು ಅಲ್ಲಿಯೇ ಇರುತ್ತೇನೆ. ನಾನು ರಾಜ್ಯ ರಾಜಕಾರಣಕ್ಕೆ ಬರುವ ವಿಚಾರವೇ ಇಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

Advertisement

ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನನಗೆ ಒಳ್ಳೆ ಖಾತೆ ಸಿಕ್ಕಿದೆ, ಅಲ್ಲಿಯೇ ಒಳ್ಳೆಯ ಕೆಲಸ ಮಾಡುತ್ತಿದ್ದೇನೆ. ನನಗೆ ಯಾವ ವರಿಷ್ಟರಿಂದಲೂ ನನಗೆ ಯಾವ ಸೂಚನೆಗಳು ಇಲ್ಲ ಎಂದರು.

ಇವೆಲ್ಲ ಸುದ್ದಿ ಹೇಗೆ ಬರುತ್ತಿವೆಯೂ ನನಗೆ ಗೊತ್ತಿಲ್ಲ. ನನ್ನ ಇಚ್ಚೆ ಇರೋದು ಮುಂದಿನ ಭಾರಿಯೂ ಮೋದಿ ಪ್ರಧಾನಿಯಾಗಬೇಕು. ಅದನ್ನೇ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಈ ವಿಷಯದ ಕುರಿತು ಪ್ರತಾಪ್ ಸಿಂಹ ಮಾತನಾಡಿ, ಬಿಜೆಪಿ ರಾಜ್ಯಾಧ್ಯಕ್ಷರು ಯಾರು ಆಗಬೇಕು ? ಯಾವಾಗ ಮಾಡಬೇಕು ? ಎಂಬುದು ನಮ್ಮ ಹೈಕಮಾಂಡ್ ನಿರ್ಧರಿಸುತ್ತೆ ಎಂದು  ಹೇಳಿದ್ದಾರೆ.

ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಈ ಬಗ್ಗೆ ಹೇಳಲು, ನಾನು ಬಹಳ ಜ್ಯೂನಿಯರ್, ನಾನು ಪಕ್ಷಕ್ಕೆ ಬಂದು ಈಗ 10 ವರ್ಷ ಆಗುತ್ತಿದೆ ಅಷ್ಟೇ. ನಾನು ಪಕ್ಷದ ನೇಮಕದ ವಿಚಾರದಲ್ಲಿ ಹೇಳಲು ಆಗುವುದಿಲ್ಲ ಎಂದರು.

Advertisement

ಪಕ್ಷದ ಕಾರ್ಯಕರ್ತರು ರಾಜ್ಯ ರಾಜಕಾರಣಕ್ಕೆ ಬನ್ನಿ ಎಂದು ಶೋಭಾ ಕರಂದ್ಲಾಜೆ ಅವರನ್ನು ಕರೆಯುತ್ತಿದ್ದರು. ನಾನು ಅದೇ ದಾಟಿಯಲ್ಲೇ ಶುಭಾಶಯ ಕೋರಿದ್ದೇನೆ ಅಷ್ಟೇ. ನಾವೆಲ್ಲ ಗೆಲ್ಲುವುದು ಮೋದಿ ಅವರ ಹೆಸರಿನಿಂದ, ಮೋದಿ ನಮ್ಮ ದೇವರು ಎಂದು ಹೇಳಿದರು.

ಲೋಕಸಭಾ ಚುನಾವಣೆಗೂ, ರಾಜ್ಯಾಧ್ಯಕ್ಷರ ನೇಮಕಕ್ಕೂ ಸಂಬಂಧ ಇರುವುದಿಲ್ಲ. ಬಿಜೆಪಿ ಸಂಘಟನೆ ದೃಷ್ಟಿಯಿಂದ ಅಷ್ಟೇ ರಾಜ್ಯಾಧ್ಯಕ್ಷರು ಆಗಬೇಕು. ಲೋಕಸಭಾ ಚುನಾವಣೆ ಮೋದಿ ಅವರ ಹೆಸರಿನಲ್ಲೇ ನಡೆಯುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next