Advertisement
ಇದು ಸೋಮವಾರ ಅಂತ್ಯಗೊಂಡ ಬಿಜೆಪಿಯ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪ್ರಧಾನಿ ಮೋದಿ ಅವರು ಪ್ರತಿಪಕ್ಷಗಳ ವಿರುದ್ಧ ಗುಡುಗಿದ ಪರಿ. ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳ 13 ಮಂದಿ ಸಿಎಂಗಳು, 6 ಉಪ ಮುಖ್ಯಮಂತ್ರಿಗಳು, ಸುಮಾರು 60 ಕೇಂದ್ರ ಸಚಿವರು, ಪಕ್ಷದ ಸಂಸದರು, ಶಾಸಕರು ಸೇರಿದ್ದ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, “ಎಲ್ಲರೂ ಪಕ್ಷವನ್ನು ಚುನಾವಣೆ ಯಾಚೆಗೂ ಕೊಂಡೊಯ್ಯಬೇಕು ಹಾಗೂ ಜನರ ಜೀವನಮಟ್ಟ ಸುಧಾರಣೆ ಕ್ರಮದಲ್ಲಿ ಸಾಮೂಹಿಕವಾಗಿ ಪಾಲ್ಗೊಳ್ಳಬೇಕು’ ಎಂದು ಕರೆ ನೀಡಿದರು.
ಕಾರ್ಯಕಾರಿಣಿಯಲ್ಲಿ ಬಿಜೆಪಿ 6 ಅಂಶಗಳ ನಿರ್ಣಯವನ್ನು ಕೈಗೊಂಡಿದೆ. ಅವೆಂದರೆ, ದೇಶವನ್ನು ಬಡತನ, ಭಯೋತ್ಪಾದನೆ, ಜಾತಿವಾದ, ಕೋಮುವಾದ ಮತ್ತು ಭ್ರಷ್ಟಾಚಾರದಿಂದ ಮುಕ್ತಗೊಳಿಸುವುದು ಹಾಗೂ ಪ್ರಧಾನಿ ಮೋದಿ ಅವರ 2022ರ ನವಭಾರತದ ಕನಸನ್ನು ನನಸಾಗಿಸುವುದು. ಹೀಗೆಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ. ಇದೇ ವೇಳೆ, ನೋಟು ಅಮಾನ್ಯ ಮತ್ತು ಜಿಎಸ್‌ಟಿಯಂಥ ಸುಧಾರಣಾ ಕ್ರಮಗಳನ್ನು ಕಾರ್ಯಕಾರಿಣಿಯಲ್ಲಿ ಶ್ಲಾ ಸಲಾಯಿತು, ನೋಟು ಅಮಾನ್ಯದಿಂದಾಗಿ ಕಾಳಸಂತೆ ಮತ್ತು ಕಪ್ಪುಕುಳಗಳ ಬೆನ್ನುಮೂಳೆ ಮುರಿಯಲಾಗಿದೆ ಎಂದು ಅಭಿಪ್ರಾಯ ಪಡಲಾಯಿತು, ರೊಹಿಂಗ್ಯಾಗಳನ್ನು ಗಡಿಪಾರು ಮಾಡುವ ನಿರ್ಧಾರವನ್ನು ಬೆಂಬಲಿಸಲಾಯಿತು, ಡೋಕ್ಲಾಂ ವಿವಾದ ಬಗೆಹರಿಸಿದ್ದಕ್ಕೆ ಪ್ರಧಾನಿ ಮೋದಿ ಅವರನ್ನು ಶ್ಲಾ ಸಲಾಯಿತು ಎಂದಿದ್ದಾರೆ.
Related Articles
ಟಿಎಂಸಿ ರಾಜ್ಯಸಭಾ ಸದಸ್ಯ, ಪಕ್ಷದ ನಂ2 ನಾಯಕ ಮುಕುಲ್ ರಾಯ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಘೋಷಿಸಿದ್ದಾರೆ. ಪಕ್ಷದ ಕಾರ್ಯಕಾರಿ ಸಮಿತಿಗೆ ರಾಜೀನಾಮೆ ನೀಡಿದ್ದು, ದುರ್ಗಾ ಪೂಜೆಯ ಬಳಿಕ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ ಎಂದಿದ್ದಾರೆ. ಬಿಜೆಪಿ ನಾಯಕ ರನ್ನು ಭೇಟಿಯಾದ ಬೆನ್ನಲ್ಲೇ ರಾಯ್ ಈ ಘೋಷಣೆ ಮಾಡಿದ್ದು, ಅವರು ಬಿಜೆಪಿಗೆ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಅವರು ಬಿಜೆಪಿಗೆ ಸೇರ್ಪಡೆಯಾದರೆ ಪಶ್ಚಿಮ ಬಂಗಾಲದಲ್ಲಿ ಪಕ್ಷವನ್ನು ಬಲಪಡಿಸುವ ಬಿಜೆಪಿ ಯತ್ನಕ್ಕೆ ಬಲಬರಲಿದೆ. ರಾಜೀನಾಮೆ ಘೋಷಣೆ ಬೆನ್ನಲ್ಲೇ ಪಕ್ಷ ವಿರೋಧಿ ಚಟುವಟಿಕೆ ಆರೋಪದಲ್ಲಿ ಅವರನ್ನು 6 ವರ್ಷಗಳ ಅಮಾನತು ಮಾಡಿ ಟಿಎಂಸಿ ಆದೇಶ ಹೊರ ಡಿಸಿದೆ. ಇನ್ನೊಂದೆಡೆ, ಕಳೆದ ವಾರ ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿದ್ದ ಮಹಾರಾಷ್ಟ್ರ ಮಾಜಿ ಸಿಎಂ ನಾರಾಯಣ ರಾಣೆ ಅವರು ಬಿಜೆಪಿ ಅಧ್ಯಕ್ಷ ಅಮಿತ್ ಶಾರನ್ನು ಭೇಟಿಯಾಗಿದ್ದು, ಅವರೂ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆಯಿದೆ.
Advertisement
ಬಿಜೆಪಿ ವಂಶಾಡಳಿತದಲ್ಲಿ ನಂಬಿಕೆ ಇಟ್ಟಿಲ್ಲ ಎಂದಾದರೆ, ಸಿಎಂ ವಸುಂಧರಾ ರಾಜೇ, ರಮಣ್ ಸಿಂಗ್, ಮಾಜಿ ಸಿಎಂ ಪ್ರೇಮ್ ಕುಮಾರ್ ಧುಮಾಲ್ ಅವರ ಮಕ್ಕಳೆಲ್ಲ ಲೋಕಸಭೆಯಲ್ಲಿ ಏನು ಮಾಡುತ್ತಿದ್ದಾರೆ?– ಮನೀಷ್ ತಿವಾರಿ, ಕಾಂಗ್ರೆಸ್ ವಕ್ತಾರ