Advertisement

“ನಾನು ಎಲ್ಲಿಯೂ ಗುಳಿಗ ದೈವದ ಟೀಕೆ ಮಾಡಿಲ್ಲ, ಆದರೆ… “: ಆರಗ ಜ್ಞಾನೇಂದ್ರ ಸ್ಪಷ್ಟನೆ

04:19 PM Mar 16, 2023 | Team Udayavani |

ಶಿವಮೊಗ್ಗ: ಕರಾವಳಿಯ ಆರಾಧ್ಯ ದೈವ ಗುಳಿಗದ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅಪಮಾನ ಮಾಡಿದ್ದಾರೆಂಬ ವಿಚಾರದ ಬಗ್ಗೆ ಭಾರೀ ಟೀಕೆ ಎದುರಾಗುತ್ತಿದೆ. ಈ ಬಗ್ಗೆ ಸ್ವತಃ ಸಚಿವರೇ ಪ್ರತಿಕ್ರಿಯೆ ನೀಡಿದ್ದಾರೆ.

Advertisement

“ನನ್ನ ವಿರುದ್ಧ ಟೀಕೆ ಮಾಡುವವರು ಯಾರು? ನನಗೆ ಗುಳಿಗ, ಪಂಜುರ್ಲಿ ಕುರಿತು ಗೌರವ ಭಕ್ತಿಯಿದೆ. ನಿನ್ನೆ ಕೂಡ ಒಂದು ಕಾರ್ಯಕ್ರಮಕ್ಕೆ ಹೋಗಿ ಬಂದಿದ್ದೇನೆ. ಯಾರಿಗೆ ಈ ದೈವದ ಬಗ್ಗೆ ನಂಬಿಕೆಯಿಲ್ಲ, ವಿಶ್ವಾಸ ಇಲ್ಲ, ಮೂಢನಂಬಿಕೆ ಎಂದು ಹೇಳಿಕೊಂಡು ತಿರುಗಾಡುತ್ತಿದ್ದವರು ನಿನ್ನೆ ತೀರ್ಥಹಳ್ಳಿಯಲ್ಲಿ ನಾಟಕವಾಡಿಸಿದ್ದಾರೆ. ಚುನಾವಣೆ ಸಮಯದಲ್ಲಿ ಜನರ ಭಾವನೆಗಳನ್ನು ರಾಜಕಾರಣಕ್ಕೆ ಕಾಂಗ್ರೆಸ್ ದುರುಪಯೋಗ ಮಾಡಿದ್ದಾರೆ ಎಂದು ನಾನು ಹೇಳಿದ್ದು” ಎಂದಿದ್ದಾರೆ.

ಇದನ್ನೂ ಓದಿ:ಎಂ.ಪಿ. ಕುಮಾರಸ್ವಾಮಿ ಬೇಡವೇ ಬೇಡ ; ವಿಜಯ ಸಂಕಲ್ಪ ಯಾತ್ರೆ ವೇಳೆ ಆಕ್ರೋಶ

ನಾನು ಎಲ್ಲಿಯೂ ಗುಳಿಗದ ಬಗ್ಗೆ ಟೀಕೆ ಮಾಡಿಲ್ಲ. ಗುಳಿಗ ಬೋರ್ಡ್ ಹಾಕಿಕೊಂಡು ಜನರ ಶ್ರದ್ಧೆ ಕಾಂಗ್ರೆಸ್ ದುರುಪಯೋಗ ಮಾಡಿಕೊಂಡಿದೆ ಎನ್ನುವ ಹಿನ್ನಲೆಯಲ್ಲಿ ನಾನು ಹೇಳಿದ್ದೆ” ಎಂದು ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next