Advertisement

ಸಚಿವ ಡಾ. ಸುಧಾಕರ್ ಗೆ ಕೋವಿಡ್ ಪಾಸಿಟಿವ್ ; ಸಣ್ಣ ಪ್ರಮಾಣದ ಜ್ವರ

10:21 PM Jun 02, 2022 | Team Udayavani |

ಬೆಂಗಳೂರು: ಆರೋಗ್ಯ ಸಚಿವ ಡಾ. ಸುಧಾಕರ್ ಅವರಲ್ಲಿ ಗುರುವಾರ ಕೋವಿಡ್ ಪಾಸಿಟಿವ್ ಕಂಡು ಬಂದಿದೆ.

Advertisement

ಮೂರು ಅಲೆಗಳ ಸಂದರ್ಭದಲ್ಲೂ ಕೋವಿಡ್ ಸೋಂಕಿನಿಂದ ಪಾರಾಗಿದ್ದ ನಾನು ಈಗ ಸೋಂಕಿಗೆ ತುತ್ತಾಗಿದ್ದೇನೆ.ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ.ಕೆಲ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದು ಹೋಮ್ ಐಸೋಲೇಷನ್ ನಲ್ಲಿ ಇದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಎಂದು ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಯಾರಾದರೂ ತಮ್ಮನ್ನು ತಾವು ಪರೀಕ್ಷಿಸಿಕೊಳ್ಳುವಂತೆ ವಿನಂತಿಸಿದ್ದಾರೆ.

ರಾಜ್ಯದಲ್ಲಿಗುರುವಾರ 297 ಹೊಸ ಪ್ರಕರಣಗಳು ವರದಿಯಾಗಿದ್ದು, ಅ ಪೈಕಿ 276 ಪ್ರಕರಣಗಳು ಬೆಂಗಳೂರಿನಲ್ಲೇ ವರದಿಯಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next