Advertisement
ಹೀಗಾಗಿ, ನನಗೆ ಸಚಿವ ಸ್ಥಾನ ಸಿಗಬಹುದು ಎಂದು ಸಂಡೂರು ಕ್ಷೇತ್ರದ ಶಾಸಕ ಈ ತುಕರಾಂ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರದಲ್ಲಿ ಏಳು ಸಚಿವ ಸ್ಥಾನಗಳು ಖಾಲಿ ಇದ್ದು, ನನಗೆ ಸಚಿವ ಸ್ಥಾನಮಾನ ನೀಡುವ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ. 2019ರ ಲೋಕಸಭಾ ಚುನಾವಣೆಯೊಳಗೆ ಸಂಪುಟ ವಿಸ್ತರಣೆ ಮಾಡುವುದು ಉತ್ತಮ. ಸರಕಾರ ರಚನೆ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲೆಗೆ ಸಚಿವ ಸ್ಥಾನ ಸಿಕ್ಕಿಲ್ಲ. ಹೀಗಾಗಿ, ಈ ಬಾರಿ ಸಚಿವ ಸ್ಥಾನ ಸಿಗಬಹುದು. ನನ್ನ ಸಾಧನೆಯ ಸಂಪೂರ್ಣ ವಿವರಗಳು ಕೆಪಿಸಿಸಿ ಮತ್ತು ಎಐಸಿಸಿಯ ಮುಖಂಡರ ಬಳಿ ಇದ್ದು, ನನಗೆ ಸಚಿವ ಸ್ಥಾನ ನೀಡುವ ಕುರಿತು ಅವರೇ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು. Advertisement
ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ: ಈ ತುಕರಾಂ
06:35 AM Dec 01, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.