Advertisement

“ನಾನೂ ಕೆಪಿಸಿಸಿ ಅಧ್ಯಕ್ಷ ಆಕಾಂಕ್ಷಿ’

03:45 AM Mar 05, 2017 | Team Udayavani |

ಚಿಕ್ಕಬಳ್ಳಾಪುರ: ತಾನು ಕೂಡ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೇನೆಂದು ಸಂಸದ, ಮಾಜಿ ಕೇಂದ್ರ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ. 

Advertisement

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿದ ಅವರು, ಕೋಲಾರ ಲೋಕಸಭಾ ಕ್ಷೇತ್ರದಿಂದ 7 ಬಾರಿ ಸಂಸದನಾಗಿ ಆಯ್ಕೆಗೊಂಡಿದ್ದೇನೆ. 10 ವರ್ಷ ಕೇಂದ್ರದಲ್ಲಿ ಮಂತ್ರಿಯಾಗಿ ಸೋನಿಯಾಗಾಂಧಿ, ಮನಮೋಹನ್‌ ಸಿಂಗ್‌ ಮಾರ್ಗದರ್ಶನದಲ್ಲಿ ತನಗೆ ವಹಿಸಿದ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ಸಮರ್ಥವಾಗಿ ನಿಭಾಯಿಸಿ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಪುನಃ ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇನೆಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next