Advertisement

ಕರ್ನಾಟಕದ ಜನತೆಯ ನಡುವೆ ಇರಲು ನಾನು ಉತ್ಸುಕನಾಗಿದ್ದೇನೆ : ಪ್ರಧಾನಿ ಮೋದಿ

09:19 PM Jan 18, 2023 | Team Udayavani |

ಕಲಬುರ್ಗಿ: ಕರ್ನಾಟಕದ ಜನತೆಯ ನಡುವೆ ಇರಲು ನಾನು ಉತ್ಸುಕನಾಗಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.

Advertisement

ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ 10,800 ಕೋಟಿಗೂ ಹೆಚ್ಚು ಮೊತ್ತದ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆಗಾಗಿ ಉತ್ತರ ಕರ್ನಾಟಕದ ಜಿಲ್ಲೆಗಳಾದ ಕಲಬುರಗಿ ಮತ್ತು ಯಾದಗಿರಿಗೆ ಆಗಮಿಸಲಿದ್ದಾರೆ.

ಕರ್ನಾಟಕದ ಜನತೆಯ ನಡುವೆ ಇರಲು ನಾನು ಉತ್ಸುಕನಾಗಿದ್ದೇನೆ. ಸುಮಾರು 10,000 ಕೋಟಿ ರೂ. ಮೌಲ್ಯದ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಅಥವಾ ಶಂಕುಸ್ಥಾಪನೆ ನೆರವೇರಿಸಲಾಗುವುದು. ಈ ಕಾಮಗಾರಿಗಳು ಜಲ ಶಕ್ತಿ, ರಸ್ತೆಗಳು ಒಳಗೊಂಡಿವೆ ಮತ್ತು ಹೊಸದಾಗಿ ಘೋಷಿಸಲಾದ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next