ಬೆಂಗಳೂರು: ನನಗೆ ಸಚಿವ ಸ್ಥಾನ ಬೇಕೇ ಬೇಕು. ಮುಖ್ಯಮಂತ್ರಿ, ರಾಜ್ಯಾಧ್ಯಕ್ಷರಿಗೂ ನಾನು ಮನವಿ ಮಾಡಿದ್ದೇನೆ. ಮೂರು ಭಾರಿ ನಾನು ಶಾಸಕನಾಗಿದ್ದೇನೆ. ಕ್ಷೇತ್ರ, ರಾಜ್ಯದ ಕೆಲಸ ಮಾಡಲು ಅವಕಾಶ ಕೊಡಬೇಕು ಎಂದು ವಿಧಾನಸಭೆ ಉಪ ಸ್ಪೀಕರ್ ಆನಂದ್ ಮಾಮನಿ ಸಚಿವ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ.
ವಿಧಾನಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ, ರಾಜ್ಯಾಧ್ಯಕ್ಷರು, ಸಂಘದ ಜೊತೆ ಮಾತನಾಡಿದ್ದೇನೆ. ವಿಸ್ತರಣೆಯನ್ನಾದರೂ ಮಾಡಲಿ. ಪುನಾರಚನೆಯನ್ನಾದರೂ ಮಾಡಲಿ. ಆದರೆ ನನಗೆ ಸಚಿವ ಸ್ಥಾನ ಬೇಕು ಎಂದಿದ್ದಾರೆ.
ಕೇವಲ ಕ್ಷೇತ್ರದ ಅಭಿವೃದ್ಧಿಗೆ ಎಂದು ಕೇಳುತ್ತಿಲ್ಲ. ಕ್ಷೇತ್ರದ ಜೊತೆ ರಾಜ್ಯದ ಕೆಲಸ ಮಾಡುತ್ತೇನೆ. ನನಗೆ ಈ ಭಾರಿ ಸಚಿವ ಸ್ಥಾನ ಕೊಡಬೇಕು ಎಂದು ಮಾಮನಿ ಒತ್ತಾಯ ಮಾಡಿದ್ದಾರೆ.
ಇದನ್ನೂ ಓದಿ:ಸಿದ್ದುಗೆ ಹೈಕಮಾಂಡ್ ಟಕ್ಕರ್ : ಮೇಲ್ಮನೆ ವಿಪಕ್ಷ ನಾಯಕತ್ವದ ಹಿಂದೆ ಲೆಕ್ಕಾಚಾರ
ಹಿರಿಯರನ್ನು ಕೈ ಬಿಡುವ ವಿಚಾರದ ಬಗ್ಗೆ ನಾನು ಮಾತನಾಡುವುದಿಲ್ಲ, ಅದು ಸಮಂಜಸವಲ್ಲ. ಅದನ್ನ ಸಿಎಂ, ಹಿರಿಯರು ನಿರ್ಧರಿಸಬೇಕು ಎಂದರು.