Advertisement

ಜೆಡಿಎಸ್ ಬಿಟ್ಟು ಹೋಗಿ ಎಂದು ಹೇಳುವಷ್ಟು ದುರಹಂಕಾರವಿಲ್ಲ: ಎಚ್.ಡಿ.ಕುಮಾರಸ್ವಾಮಿ

01:28 PM Aug 30, 2021 | Team Udayavani |

ಕಲಬುರಗಿ: ಜೆಡಿಎಸ್ ಪಕ್ಷ ತೆರೆದ ಬಾಗಿಲಿದ್ದಂತೆ. ಹೋಗುವವರು ಹೋಗಲಿ, ಬರುವವರು ಬರಲಿ‌. ಆದರೆ, ಪಕ್ಷ ಬಿಟ್ಟು ಹೋಗಿ ಎಂದು ಹೇಳುವಷ್ಟು ದುರಹಂಕಾರ ಮಾತ್ರ ಇಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

Advertisement

ಮಹಾನಗರ ಪಾಲಿಕೆ ಚುನಾವಣಾ ಪ್ರಚಾರಕ್ಕಾಗಿ ಸೋಮವಾರ ನಗರಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಸೇರುವ ಬಗ್ಗೆ ಜಿ.ಟಿ.ದೇವೇಗೌಡ ಅವರು ತಮ್ಮ ನಿರ್ಧಾರವನ್ನು ಹೇಳಿದ್ದಾರೆ. ಈ ಬಗ್ಗೆ ನಾನು ಹೆಚ್ಚು ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ನಾವು ಮುಖಂಡರನ್ನು ಕರೆತರಲು ಬೇರೆ ಪಕ್ಷದ ಮುಖಂಡರ ಮನೆ ಬಳಿ ನಿಂತಿಲ್ಲ.‌ ಕಾಂಗ್ರೆಸ್, ಬಿಜೆಪಿಯವರೇ ಈ ಕೆಲಸ ಮಾಡುತ್ತಿದ್ದಾರೆ ಎಂದರು.

ನಾನು ಬಿಜೆಪಿ ಪರವಾಗಿ ಇಲ್ಲ. ಕಾಂಗ್ರೆಸ್ ಪರವಾಗಿಯೂ ಇಲ್ಲ. ಕಾಂಗ್ರೆಸ್ ಅಧ್ಯಕ್ಷರು ಯಡಿಯೂರಪ್ಪನವರ ಪರವಾಗಿ ಸಾಫ್ಟ್ ಕಾರ್ನರ್ ಮಾತುಗಳನ್ನು ಹೇಳಿದ್ದಾರೆ. ಆದರೆ, ನಮಗೆ ಸಾಫ್ಟ್ ಕಾರ್ನರ್ ಅವಶ್ಯಕತೆ ಇಲ್ಲ ಎಂದರು.

ಇದನ್ನೂ ಓದಿ:ಜನರ ಹಸಿವನ್ನು ಅಣಕಿಸುವ ಬಿಜೆಪಿ ಸರ್ಕಾರ ‘ಸಾವಿನಭಾಗ್ಯ’ ನೀಡುತ್ತಿದೆ: ಕಾಂಗ್ರೆಸ್

ಕೋವಿಡ್ ಕಾರಣ ಹೋರಾಟ ಮಾಡಲಾಗಿಲ್ಲ. ಅವಶ್ಯಕತೆ ಬಂದಾಗ ಹೋರಾಟಕ್ಕೆ ಧುಮಕುತ್ತಿವೆ. ಕಾಂಗ್ರೆಸ್ ನಾಯಕರು ಪ್ರತಿನಿತ್ಯ ಭ್ರಷ್ಟಾಚಾರ ಬಗ್ಗೆ ಮಾತನಾಡುತ್ತಿದ್ದಾರೆ. ಅವರ ಅವಧಿಯಲ್ಲಿ ಏನಾಗಿದೆ ಅಂತ ಎಲ್ಲರಿಗೂ ಗೊತ್ತಿದೆ ಎಂದು ಕಿಡಿಕಾರಿದರು.

Advertisement

ರಾಜಕಾರಣದಲ್ಲಿ ಇತ್ತೀಚೆಗೆ ಸಿದ್ಧಾಂತಗಳಲ್ಲಿ ಬೆನ್ನು ತಟ್ಟಿಕೊಳ್ಳುವ ಸ್ಥಿತಿ ಇಲ್ಲ. ಮೈಸೂರು ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರೇ ನಮ್ಮ ಜೊತೆ ಮೈತ್ರಿಗೆ ಸಿದ್ದರಿರಲಿಲ್ಲ.‌ ಕಲಬುರಗಿ ಪಾಲಿಕೆಯಲ್ಲಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ. ಒಂದು ವೇಳೆ ಅತಂತ್ರ‌ ಫಲಿತಾಂಶ ಬಂದರೆ ಮುಂದೆ ಯಾವ ಪಕ್ಷದೊಂದಿಗೆ ‌ಮೈತ್ರಿ ಮಾಡಿಕೊಳ್ಳಬೇಕು ಎಂಬುದನ್ನು ಮುಂದೆ ನಿರ್ಧರಿಸುತ್ತೇವೆ ಎಂದರು.

ನಮ್ಮ ಪಕ್ಷದ ಕಾರ್ಯಕರ್ತರು ಸರಿ ಇಲ್ಲ ಎಂದು ನಾನು ಎಲ್ಲೂ ಹೇಳಿಲ್ಲ. ಅದನ್ನು ಮಾಧ್ಯಮಗಳು ತಿರುಚಿ, ಅಪಪ್ರಚಾರ ಮಾಡಿವೆ. ನಾನು ಬಂದು ಹೋದ ನಂತರ ಕಾರ್ಯಕರ್ತರು ನಿಷ್ಕ್ರಿಯರಾಗುತ್ತಾರೆ ಎಂದು ಮುಖಂಡರು ಹೇಳಿದ್ದರು. ಅದನ್ನೇ ‌ನಾನು ಹೇಳಿದ್ದೇನೆ. ನಮ್ಮ ಪಕ್ಷದ ಉಳಿದಿರುವುದೇ ಲಕ್ಷಾಂತರ ‌ಕಾರ್ಯಕರ್ತರಿಂದ ಉಳಿದಿದೆ. ಕಾರ್ಯಕರ್ತರಿಗೆ ನಾನು ಅವಹೇಳನ, ಅವಮಾನ ಮಾಡುವ ಕೆಲಸ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ಶಾಸಕ ಬಂಡೆಪ್ಪ‌ ಕಾಶೆಂಪೂರ, ಜೆಡಿಎಸ್ ಜಿಲ್ಲಾಧ್ಯಕ್ಷ ಕೇದಾರಲಿಂಗಯ್ಯ ಹಿರೇಮಠ, ಮುಖಂಡರಾದ ನಾಸಿರ್ ಹುಸೇನ್, ಸಂಜೀವನ ಯಾಕಾಪುರ, ಬಾಲರಾಜ ಗುತ್ತೇದಾರ, ಶಿವಕುಮಾರ ನಾ

Advertisement

Udayavani is now on Telegram. Click here to join our channel and stay updated with the latest news.

Next