Advertisement

ನೋವುಂಡ ಹೆಣ್ಣು ಮಕ್ಕಳ ಪರ ಪ್ರಶಸ್ತಿ ಸ್ವೀಕರಿಸುವೆ

10:40 PM Dec 18, 2019 | Lakshmi GovindaRaj |

ಬೆಂಗಳೂರು: ನನ್ನ ಹಾಗೆ ನೋವುಂಡ ಲಕ್ಷಾಂತರ ಹೆಣ್ಣು ಮಕ್ಕಳ ಪರವಾಗಿ ನಾನು ಈ ಪ್ರಶಸ್ತಿಯನ್ನು ಸ್ವೀಕರಿಸುತ್ತೇನೆ. ಇದು ಕೇಂದ್ರ ಸಾಹಿತ್ಯ ಅಕಾಡೆಮಿಯ 2019ನೇ ಸಾಲಿನ ಪ್ರಶಸ್ತಿಗೆ ಪಾತ್ರರಾಗಿರುವ ಹಿರಿಯ ಪತ್ರಕರ್ತೆ ಡಾ.ವಿಜಯಾ ಅವರ ಮನದಾಳದ ನುಡಿ.

Advertisement

ತಮ್ಮ “ಕುದಿ ಎಸರು’ ಆತ್ಮಕಥನ ಕೃತಿ ಅಕಾಡೆಮಿ ಪ್ರಶಸ್ತಿಗೆ ಭಾಜನವಾಗಿರುವ ಹಿನ್ನೆಲೆಯಲ್ಲಿ ಬುಧವಾರ “ಉದಯವಾಣಿ’ಯೊಂದಿಗೆ ಮಾತನಾಡಿದ ಡಾ.ವಿಜಯಾ, ಪ್ರಶಸ್ತಿ ಬಂದಿದ್ದಕ್ಕೆ ಸಂತಸ ವ್ಯಕ್ತಪಡಿಸಿದರು. “ಕುದಿ ಎಸರು’ ಆತ್ಮಕಥೆಯಾದ್ದರಿಂದ ಲಕ್ಷಾಂತರ ಹೆಣ್ಣು ಮಕ್ಕಳ ನೋವು ಎಂದು ಗ್ರಹಿಸಿ, ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಇದಕ್ಕಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಮತ್ತು ಆಯ್ಕೆ ಸಮಿತಿಗೆ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ನನ್ನ ಹಾಗೆ ನೋವುಂಡ ಲಕ್ಷಾಂತರ ಹೆಣ್ಣು ಮಕ್ಕಳ ಪರವಾಗಿ ನಾನು ಈ ಪ್ರಶಸ್ತಿಯನ್ನು ಸ್ವೀಕರಿಸುತ್ತೇನೆ. ಜತೆಗೆ, ಪ್ರಶಸ್ತಿಯ ಮೊತ್ತವನ್ನು ಸಮಾಜ ಕಾರ್ಯಕ್ಕೆ ವಿನಿಯೋಗ ಮಾಡುತ್ತೇನೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next