Advertisement

ಏಕರೂಪ ನಾಗರಿಕ ಸಂಹಿತೆ ಜಾರಿಗೆ ಪ್ರಧಾನಿಯನ್ನು ಒತ್ತಾಯಿಸಿದ ರಾಜ್ ಠಾಕ್ರೆ

03:15 PM May 22, 2022 | Team Udayavani |

ಮುಂಬಯಿ: ಏಕರೂಪ ನಾಗರಿಕ ಸಂಹಿತೆ, ಜನಸಂಖ್ಯೆಯನ್ನು ನಿಯಂತ್ರಿಸಲು ಮಾನದಂಡಗಳನ್ನು ತರುವಂತೆ ಮತ್ತು ಔರಂಗಾಬಾದ್ ಹೆಸರನ್ನು ಸಂಭಾಜಿ ನಗರ ಎಂದು ಬದಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಅಧ್ಯಕ್ಷ ರಾಜ್ ಠಾಕ್ರೆ ಮನವಿ ಮಾಡಿದ್ದಾರೆ.

Advertisement

ಮಹಾರಾಷ್ಟ್ರದ ಕೆಲವು ಪಕ್ಷಗಳು ರಾಜಕೀಯ ಲಾಭಕ್ಕಾಗಿ ಎಐಎಂಐಎಂಗೆ ಬೆಂಬಲ ನೀಡುತ್ತಿವೆ ಎಂದು ರಾಜ್ ಠಾಕ್ರೆ ಪ್ರತಿಪಾದಿಸಿದರು, ಅಸಾದುದ್ದೀನ್ ಓವೈಸಿ ನೇತೃತ್ವದ ಪಕ್ಷದ ನಾಯಕರೊಬ್ಬರು ಔರಂಗಾಬಾದ್‌ನಿಂದ ಚುನಾಯಿತರಾದರು. ಔರಂಗಾಬಾದ್‌ನಲ್ಲಿರುವ ಮೊಘಲ್ ಚಕ್ರವರ್ತಿ ಔರಂಗಜೇಬ್‌ನ ಸಮಾಧಿಗೆ ಎಐಎಂಐಎಂ ನಾಯಕ ಅಕ್ಬರುದ್ದೀನ್ ಓವೈಸಿ ಇತ್ತೀಚೆಗೆ ಭೇಟಿ ನೀಡಿರುವುದು “ಆಘಾತಕಾರಿ” ಎಂದು ರಾಜ್ ಠಾಕ್ರೆ ಬಣ್ಣಿಸಿ,  ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ವಿರುದ್ಧ ವಾಗ್ದಾಳಿ ನಡೆಸಿದರು.

“ಶರದ್ ಪವಾರ್ ಅವರು ಔರಂಗಜೇಬ್ ಒಬ್ಬ ಸಂತ ಎಂದು ಭಾವಿಸುತ್ತಾರೆಯೇ? ಔರಂಗಜೇಬನು ತನ್ನ ಸಾಮ್ರಾಜ್ಯವನ್ನು ವಿಸ್ತರಿಸಲು ಬಂದನೆಂದು ಅವರು  ಹೇಳುತ್ತಾನೆ. ಔರಂಗಜೇಬ್ ಛತ್ರಪತಿ ಶಿವಾಜಿ ಮಹಾರಾಜರನ್ನು ಕೊಲ್ಲಲು ಬಂದಿಲ್ಲವೇ? ಇದನ್ನು ಈಗ ಮರೆಯಲಾಗುತ್ತಿದೆ ಎಂದು ರಾಜ್ ಠಾಕ್ರೆ ಹೇಳಿದರು. ಔರಂಗಾಬಾದ್‌ನಲ್ಲಿರುವ ಔರಂಗಜೇಬನ ಗೋರಿ  ಅಭಿವೃದ್ಧಿಗೆ ಹಣ ನೀಡುತ್ತಿರುವವರು ಯಾರು ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ : ಅಸ್ಸಾಂನಲ್ಲಿ ಪೊಲೀಸ್ ಠಾಣೆಗೆ ಬೆಂಕಿ: ದುಷ್ಕರ್ಮಿಗಳ 5 ಮನೆಗಳು ನೆಲಸಮ

ಎರಡು ದಿನಗಳ ಹಿಂದೆ, ನನ್ನ ಅಯೋಧ್ಯೆ ಭೇಟಿಯನ್ನು ಮುಂದೂಡುವ ಬಗ್ಗೆ ನಾನು ಟ್ವೀಟ್ ಮಾಡಿದ್ದೆ. ಪ್ರತಿಯೊಬ್ಬರೂ ತಮ್ಮ ಪ್ರತಿಕ್ರಿಯೆಗಳನ್ನು ನೀಡಲು ನಾನು ಉದ್ದೇಶಪೂರ್ವಕವಾಗಿ ಹೇಳಿಕೆ ನೀಡಿದ್ದೇನೆ. ನನ್ನ ಅಯೋಧ್ಯೆ ಭೇಟಿಗೆ ವಿರೋಧ ವ್ಯಕ್ತಪಡಿಸಿದವರು ನನ್ನನ್ನು ಬಲೆಗೆ ಬೀಳಿಸಲು ಪ್ರಯತ್ನಿಸುತ್ತಿದ್ದಾರೆ, ಆದರೆ ನಾನು ಈ ವಿವಾದಕ್ಕೆ ಸಿಲುಕದಿರಲು ನಿರ್ಧರಿಸಿದೆ ಎಂದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next