ನವದೆಹಲಿ: ರೈತ ಹೋರಾಟವನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದ ಸ್ವೀಡಿಶ್ ನ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್ಬರ್ಗ್ ವಿರುದ್ಧ ದೆಹಲಿ ಸೈಬರ್ ಪೊಲೀಸರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಇದೀಗ ಮತ್ತೊಮ್ಮೆ ನಾನು ಈಗಲೂ ರೈತರ ಪರವಾಗಿದ್ದೇನೆ ಎಂದು ಥನ್ಬರ್ಗ್ ಟ್ವೀಟ್ ಮಾಡಿದ್ದಾರೆ.
ನಾನು ಈಗಲೂ ರೈತರ ಪರವಾಗಿ ಇದ್ದೇನೆ, ಅವರ ಶಾಂತಿಯುತ ಪ್ರತಿಭಟನೆಯನ್ನು ಬೆಂಬಲಿಸುತ್ತೇನೆ. ಯಾವುದೇ ರೀತಿಯ ದ್ವೇಷ, ಬೆದರಿಕೆ ಮಾನವ ಹಕ್ಕುಗಳ ಉಲ್ಲಂಘನೆಗಳು ಅದನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ದೇವರಕೆರೆಯಲ್ಲಿ ಜೀವ ವೈವಿಧ್ಯಕ್ಕೆ ಮಾರಕವಾದ ಪ್ಲೆಕೋ ಮೀನುಗಳು ಪತ್ತೆ!
ಬುಧವಾರ (ಫೆ.3) ಭಾರತದಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಬೆಂಬಲಿಸುವುದಾಗಿ ಗ್ರೇಟಾ ಥನ್ಬರ್ಗ್ ಟ್ವೀಟ್ ಮಾಡಿದ್ದರು. ‘ಗ್ಲೋಬಲ್ ಫಾರ್ಮರ್ ಸ್ಟ್ರೈಕ್ ಫಸ್ಟ್ ವೇವ್’ ಎಂಬ ಹೆಸರಿನ ದಾಖಲೆಯನ್ನು ಈ ವೇಳೆ ಲಗತ್ತಿಸಿದ್ದರು. ಇದರಲ್ಲಿನ ಕೆಲವು ವಿಚಾರಗಳು ವಿವಾದಕ್ಕೆ ಕಾರಣವಾಗಿ ಗ್ರೇಟಾ ವಿರುದ್ಧ ಹಲವು ಭಾರತೀಯ ಗಣ್ಯ ವ್ಯಕ್ತಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಮಾತ್ರವಲ್ಲದೆ ಇದು ಭಾರತದ ಆಂತರಿಕ ವಿಚಾರ ಎಂದು ತಿಳಿಸಿದ್ದರು.
ಅಂತರಾಷ್ಟ್ರೀಯ ಪಾಪ್ ಗಾಯಕಿ ರಿಹಾನ ಕೂಡ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವ ರೈತರಿಗೆ ಬೆಂಬಲ ನೀಡುವುದಾಗಿ ತಿಳಿಸಿದ್ದರು.
ಇದನ್ನೂ ಓದಿ: 60 ಅಡಿ ಸಮುದ್ರದಾಳದಲ್ಲಿ ತಾಳಿ ಕಟ್ಟಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ನವ ಜೋಡಿ