Advertisement

ಸಿಎಂ ಕೇಜ್ರಿವಾಲ್ ಭೇಟಿ ಬೆನ್ನಲ್ಲೆ ನಟ ಸೋನು ಸೂದ್‍ಗೆ ’ಐಟಿ’ ಶಾಕ್

06:24 PM Sep 15, 2021 | Team Udayavani |

ಮುಂಬೈ : ತೆರಿಗೆ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ ಎನ್ನುವ ಆರೋಪದ ಮೇಲೆ ಜನಪ್ರಿಯ ಬಾಲಿವುಡ್ ನಟ ಸೋನು ಸೂದ್ ಅವರಿಗೆ ಮನೆ ಮೇಲೆ ಐಟಿ ದಾಳಿ ನಡೆದಿದೆ.

Advertisement

ಬುಧವಾರ ಮುಂಬೈನಲ್ಲಿರುವ ಮನೆ ಹಾಗೂ ಲಖನೌನಲ್ಲಿ ಕಂಪನಿ ಸೇರಿದಂತೆ ಸೋನು ಸೂದ್ ಅವರಿಗೆ ಸಂಬಂಧಿಸಿದ ಆರು ಸ್ಥಳಗಳಲ್ಲಿ ಕೇಂದ್ರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ.

ಕೋವಿಡ್ ಬಿಕ್ಕಟ್ಟಿನ ಸಮಯದಲ್ಲಿ ಸೋನು ಸೂದ್ ಅವರು ಸಾಕಷ್ಟು ಸಾಮಾಜಿಕ ಕಾರ್ಯ ಮಾಡಿದ್ದರು. ಪ್ರಸ್ತುತ ಕೂಡ ಜನಪರ ಕಾರ್ಯದಲ್ಲಿ ತೊಡಗಿರುವ ಈ ನಟ ಇತ್ತೀಚೆಗಷ್ಟೇ ದೆಹಲಿ ಸರ್ಕಾರದ ಮಹತ್ವಾಕಾಂಕ್ಷೆಯ ‘ದೇಶ್ ಕಿ ಮೆಂಟರ್’ ಕಾರ್ಯಕ್ರಮದ ರಾಯಭಾರಿಯಾಗಿ ನೇಮಕಗೊಂಡಿದ್ದರು. ಸೋನು ಸೂದ್ ಅವರು ನಿನ್ನೆಯಷ್ಟೇ ಇದೇ ವಿಚಾರವಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.

ಇನ್ನೊಂದೆಡೆ ಸೋನು ಸೂದ್ ಅವರು ಎಎಪಿ ಪಕ್ಷವನ್ನು ಸೇರಲಿದ್ದಾರೆ ಹಾಗೂ ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ವದಂತಿಯನ್ನು ಸೋನು ಸೂದ್ ತಳ್ಳಿಹಾಕಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next