Advertisement

ಡಿಸಿಸಿ ಬ್ಯಾಂಕ್ ಅಧ್ಯಕ್ಷನ ಮನೆ ಮೇಲೆ ಐಟಿ ದಾಳಿ

04:48 PM Nov 08, 2017 | Sharanya Alva |

ಶಿವಮೊಗ್ಗ: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷನ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದು, ಲೆಕ್ಕಪತ್ರಗಳ ಪರಿಶೀಲನೆ ನಡೆಸುತ್ತಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

Advertisement

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಮನೆ ಮೇಲೆ ಐಟಿ ದಾಳಿ ನಡೆದಿದೆ. ಶಿವಮೊಗ್ಗದಲ್ಲಿರುವ ಡಿಸಿಸಿ ಬ್ಯಾಂಕ್ ಹಾಗೂ ಕರಕುಚ್ಚಿ ಗ್ರಾಮದಲ್ಲಿರುವ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿ ಹೇಳಿದೆ. ಅಲ್ಲದೇ ಶರಾವತಿ ನಗರದಲ್ಲಿರುವ ಮನೆ ಮೇಲೂ ದಾಳಿ ನಡೆಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next