ದೆಹಲಿ/ ಮುಂಬಯಿ: ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಕುರಿತ ಸಾಕ್ಷ್ಯಚಿತ್ರವನ್ನು ಬಿತ್ತರಿಸಿ ವಿವಾದಕ್ಕೀಡಾದ ಬಿಬಿಸಿಯ ದೆಹಲಿ ಹಾಗೂ ಮುಂಬಯಿ ಕಚೇರಿಯ ಮೇಲೆ ಐಟಿ ಅಧಿಕಾರಿಗಳು ಮಂಗಳವಾರ (ಫೆ.14 ರಂದು) ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಮುಂಬಯಿನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ಹಾಗೂ ಖಾರ್ ಪ್ರದೇಶದಲ್ಲಿ ಕಚೇರಿಯಿದೆ. 20 ಕ್ಕೂ ಹೆಚ್ಚಿನ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಗಳನ್ನು ಮನೆಗೆ ಹೋಗಲು ತಿಳಿಸಲಾಗಿದ್ದು, ಪ್ರಮುಖರು ಮಾತ್ರ ಕಚೇರಿಯಲ್ಲಿ ಇರಬೇಕು ಎಂದು ಅಧಿಕಾರಿಗಳು ಕಚೇರಿಯಲ್ಲಿ ಉದ್ಯೋಗಿಗಳಿಗೆ ಹೇಳಿದ್ದಾರೆ. ಇದರೊಂದಿಗೆ ಕೆಲ ಉದ್ಯೋಗಿಗಳ ಮೊಬೈಲ್ ಪೋನ್ ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.
ಅಂತಾರಾಷ್ಟ್ರೀಯ ತೆರಿಗೆ ಮತ್ತು ವರ್ಗಾವಣೆ ಬೆಲೆ ಅಕ್ರಮಗಳ ಆರೋಪಗಳಿಗೆ ಸಂಬಂಧಿಸಿ ಐಟಿ ಅಧಿಕಾರಿಗಳು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಅಧಿಕಾರಿಗಳು ಬಿಬಿಸಿಯ ಹಣಕಾಸು ಇಲಾಖೆಯನ್ನು ಅದರ ಬ್ಯಾಲೆನ್ಸ್ ಶೀಟ್ ಮತ್ತು ಖಾತೆಗಳ ವಿವರಗಳನ್ನುನೀಡಲು ಹೇಳಿದ್ದಾರೆ ಎಂದು ವರದಿ ತಿಳಿಸಿದೆ.
ಐಟಿ ದಾಳಿಗೆ ವಿಪಕ್ಷಗಳು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.