Advertisement

ಚುನಾವಣೆ ದಿನಾಂಕ ನಿಗದಿಯಾಗದೆ ನಾನು ಸಚಿವ ಸ್ಥಾನದ ಆಕಾಂಕ್ಷಿ ಎಂದ ಪ್ರತಾಪ್ ಗೌಡ ಪಾಟೀಲ್

01:32 PM Nov 24, 2020 | keerthan |

ಬೆಂಗಳೂರು: ಮಸ್ಕಿ ವಿಧಾನಸಭಾ ಉಪಚುನಾವಣೆ ದಿನಾಂಕ ಇನ್ನೂ ಘೋಷಣೆ ಆಗದಿದ್ದರೂ, ನಾನು‌ ಸಚಿವ ಸ್ಥಾನದ ಆಕಾಂಕ್ಷಿ ಎಂದು ಬಿಜೆಪಿಯ ಪ್ರತಾಪ್ ಗೌಡ ಪಾಟೀಲ್ ಹೇಳಿದ್ದಾರೆ.

Advertisement

ಮಸ್ಕಿ ಕ್ಷೇತ್ರದ ಬಿಜೆಪಿ ಸಂಭಾವ್ಯ ಅಭ್ಯರ್ಥಿಯಾಗಿರುವ ಪ್ರತಾಪ್ ಗೌಡ ಪಾಟೀಲ್ ವಿಧಾನಸೌಧದಲ್ಲಿ ಹೇಳಿಕೆ ನೀಡಿದ್ದು, ಸರ್ಕಾರ ರಚನೆಯಾಗುವಾಗ 17 ಜನರಿಗೆ ಸಚಿವ ಸ್ಥಾನದ ಭರವಸೆ ನೀಡಲಾಗಿತ್ತು. ಆ ಭರವಸೆ ಈಡೇರಿಸುತ್ತಾರೆ ಎಂದರು.

ಹೌದು ನಾನು ಸಚಿವ ಸ್ಥಾನದ ಆಕಾಂಕ್ಷಿ ಎಂದ ಪ್ರತಾಪ್ ಗೌಡ ಪಾಟೀಲ್, ನಾನು ಹಣಕ್ಕಾಗಿ ಬಿಜೆಪಿಗೆ ಬಂದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ ಮೆಚ್ಚಿ ನಾನು ಬಿಜೆಪಿಗೆ ಬಂದಿದ್ದೇನೆ. ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ:ರೋಶನ್ ಬೇಗ್ ಬಿಜೆಪಿ ಪಕ್ಷ ನಂಬಿಕೊಂಡು ಬರಲಿಲ್ಲ: ಸಚಿವ ಸೋಮಶೇಖರ್

ಕ್ಷೇತ್ರದ ಜನರು ನನ್ನನ್ನ ಗೆಲ್ಲಿಸುವ ವಿಶ್ವಾಸ ಇದೆ ಎಂದ ಅವರು ನಮ್ಮಲ್ಲಿ ಯಾವುದೇ ಅಸಮಾಧಾನ ಇಲ್ಲ. ನಾವೆಲ್ಲರೂ ಒಟ್ಟಾಗಿ ಇದ್ದೇವೆ, ಎಲ್ಲರೂ ಚುನಾವಣಾ ಪ್ರಚಾರಕ್ಕೆ ಬರುತ್ತಾರೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next