Advertisement

ನಾನು ಉಪಮುಖ್ಯಮಂತ್ರಿ ಆಗುವೆ

08:00 AM May 05, 2018 | Team Udayavani |

ಕೊಳ್ಳೇಗಾಲ: ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಯಾದರೆ, ನಾನು ಉಪ ಮುಖ್ಯಮಂತ್ರಿ ಆಗುವೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದರು.

Advertisement

ಸಾರ್ವಜನಿಕರ ಹಣವನ್ನು ಮುಖ್ಯಮಂತ್ರಿಯವರು ಬಾದಾಮಿಯಲ್ಲಿ ಖರ್ಚು ಮಾಡಿ ವ್ಯರ್ಥ ಮಾಡುತ್ತಿದ್ದಾರೆ. ಆದರೂ ಅವರು ಅಲ್ಲಿ ಗೆಲ್ಲುವುದಿಲ್ಲ. ರಾಜ್ಯದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಬರಲಿದೆ. ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿಯಾದರೆ, ನಾನು ಉಪ ಮುಖ್ಯಮಂತ್ರಿ ಆಗುವೆ ಎಂದು ಹೇಳಿದರು.

ಸಿದ್ದರಾಮಯ್ಯನವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲುವ ಭೀತಿಯಿಂದ ಬಾದಾಮಿಯಲ್ಲಿ ಸ್ಪರ್ಧಿಸಿದ್ದಾರೆ. ಕರ್ನಾಟಕವನ್ನು ಕಾಂಗ್ರೆಸ್‌ ಮುಕ್ತ ರಾಜ್ಯವನ್ನಾಗಿ ಮಾಡಬೇಕು ಎಂದು ಜನತೆಗೆ ಕರೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next