Advertisement

ವರಿಷ್ಠರ ಮನವೊಲಿಸಿ ಶಿಕಾರಿಪುರದಿಂದಲೇ ಸ್ಪರ್ಧಿಸುತ್ತೇನೆ !

10:55 AM Sep 27, 2017 | |

ಶಿವಮೊಗ್ಗ : ‘ನಾನು ಶಿಕಾರಿಪುರದಿಂದಲೇ ಸ್ಪರ್ಧಿಸುತ್ತೇನೆ. ಈ ಕುರಿತು ವರಿಷ್ಠರ ಮನವೊಲಿಸಲು ಯತ್ನಿಸುತ್ತೇನೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಬುಧವಾರ ಹೇಳಿಕೆ ನೀಡಿದ್ದಾರೆ. 

Advertisement

ಸುದ್ದಿಗಾರರೊಂದಿಗೆ ಮಾತನಾಡಿ ‘ನಾನು ಶಿಕಾರಿಪುರದಿಂದಲೇ ಸ್ಪರ್ಧಿಸುವಂತೆ ಜನ ಆಗ್ರಹಿಸುತ್ತಿದ್ದಾರೆ. ಹೀಗಾಗಿ ಇಲ್ಲಿಂದಲೆ ಸ್ಪರ್ಧಿಸಲು ಒಲವು ಹೊಂದಿದ್ದೇನೆ’ ಎಂದರು. 

‘ಬಿ.ಎಲ್‌.ಸಂತೋಷ್‌ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಇಬ್ಬರೂ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತಿದ್ದು, ಪಕ್ಷದ ಸಂಘಟನೆಯಲ್ಲಿ ನಿರತವಾಗಿದ್ದೇವೆ’ ಎಂದರು. 

ತೇರದಾಳ ಕ್ಷೇತ್ರದಿಂದ ಸ್ಪರ್ಧಿಸುವಂತೆ ಬಿಜೆಪಿ ವರಿಷ್ಠರು ಸೂಚನೆ ನೀಡಿದ್ದು, ಯಡಿಯೂರಪ್ಪ ಅವರಿಗೆ ಅಲ್ಲಿಂದ ಸ್ಪರ್ಧಿಸಲು ಮನಸ್ಸಿಲ್ಲ ಎನ್ನುವುದು ಅವರ ಹೇಳಿಕೆಯಿಂದ ಸ್ಪಷ್ಟವಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next