Advertisement

Hosapete; ‘ನಾನೇ ಸಿಎಂ ಆಗಿ ಮುಂದುವರಿಯುವೆ’: ಸಿದ್ದರಾಮಯ್ಯ ಮಹತ್ವದ ಹೇಳಿಕೆ

04:05 PM Nov 02, 2023 | Team Udayavani |

ಹೊಸಪೇಟೆ: ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಬಗ್ಗೆ ಯಾರೂ ಮಾತನಾಡಬಾರದು ಎಂದು ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದ ಒಂದು ದಿನದ ನಂತರವೇ, “ನಾನೇ ಸಿಎಂ ಆಗಿ ಮುಂದುವರೆಯುವೇ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು ಹೊಸ ಚರ್ಚೆಗೆ ಕಾರಣವಾಗಿದೆ.

Advertisement

ವಿಜಯನಗರ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಗುರುವಾರ ಹೊಸಪೇಟೆಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡುವಾಗ, ‘ಐದು ವರ್ಷ ನೀವೇನಾ ಸಿಎಂ’ ಎನ್ನುವ ಪ್ರಶ್ನೆಗೆ ಉತ್ತರಿಸಿ, ‘ನಾನೇ ಮುಂದುವರೆಯುವೆ’ ಎಂದಷ್ಟೇ ಹೇಳಿದ್ದಾರೆ. ‘ಐದು ವರ್ಷ ನಮ್ಮದೆ ಸರ್ಕಾರ ಇರುತ್ತದೆ. ನಾನು ಈಗ ಮುಖ್ಯಮಂತ್ರಿ. ನಾನೇ ಮುಂದುವರಿಯುವೆ’ ಎಂದರು.

ಡಿಸಿಎಂ ವಿಚಾರ ತಿರ್ಮಾನ ಮಾಡುವುದು ಹೈಕಮ್ಯಾಂಡ್‌ಗೆ ಬಿಟ್ಟದ್ದು. ನಮ್ಮದು ರಾಷ್ಟ್ರೀಯ ಪಕ್ಷ. ಏನೆ ತೀರ್ಮಾನವಾದರೂ ಹೈಕಮಾಂಡ್ ಜೊತೆ ಚರ್ಚೆ ಮಾಡಿಯೇ ತೆಗೆದುಕೊಳ್ಳುವುದು ಎಂದರು.

ಇದನ್ನೂ ಓದಿ:ICC World Cup: ಸಂಗಕ್ಕರ, ಶಕೀಬ್, ರೋಹಿತ್ ದಾಖಲೆ ಮುರಿದ ವಿರಾಟ್ ಕೊಹ್ಲಿ

ಸರ್ಕಾರ ಬೀಳುತ್ತದೆ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅವರು ಸೋತಿದ್ದಾರೆ. ಆತನಿಗೆ ಬೇರೆ ಕೆಲಸ ಇಲ್ಲದೆ ಬಾಯಿಗೆ ಬಂದಂತೆ ಮಾತಾಡುತ್ತಿದ್ದಾನೆ. ರಾಜ್ಯದ ಜನ ನಮಗೆ 136 ಸೀಟು ಕೊಟ್ಟು ಗೆಲ್ಲಿಸಿದ್ದಾರೆ. ನಾವು ಐದು ವರ್ಷ ಸುಭದ್ರ ಸರ್ಕಾರ ಕೊಡುತ್ತೇವೆ ಎಂದರು.

Advertisement

ಬಿಜೆಪಿಗರು ಭ್ರಮನಿರಶನಗೊಂಡಿದ್ದಾರೆ. ಅವರಿಗೆ ಅಧಿಕಾರ ಇಲ್ಲದೆ ಇರಲು ಆಗುವುದಿಲ್ಲ. ಮತ್ತೆ ಅಪರೇಷನ್ ಮಾಡಲು ಪ್ರಯತ್ನ ಮಾಡ್ತಾರೆ. ಅದು ಸಾಧ್ಯವಾಗಲ್ಲ ಎಂದು ಅವರು ತಿಳಿಸಿದರು.

ಸಚಿವರಾದ ಜಮೀರ್ ಅಹಮ್ಮದ್ ಖಾನ್, ಶಿವರಾಜ್ ತಂಗಡಗಿ, ಭೈರತಿ ಸುರೇಶ್, ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್, ಪಕ್ಷೇತರ ಶಾಸಕಿ ಎಂ.ಪಿ.ಲತಾ ಇತರರಿದ್ದರು.

ಸಿಎಂ ಸಿದ್ದರಾಮಯ್ಯ ಅವರನ್ನು ಮಕ್ಕಳು ಗುಲಾಬಿ ಹೂ ನೀಡಿ ಸ್ವಾಗತಿಸಿದ್ದು ವಿಶೇಷವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next