Advertisement

“ಕನ್ನಡ ಕಟ್ಟುವ ಕೆಲಸಕ್ಕೆ ಕೈಜೋಡಿಸುವೆ”

05:02 PM Mar 12, 2022 | Team Udayavani |

ಯಾದಗಿರಿ: ಗಡಿಭಾಗದಲ್ಲಿ ಕನ್ನಡ ಕಟ್ಟುವ ಕೆಲಸ ನಿರಂತರ ನಡೆಯಬೇಕಿದೆ. ಆ ದಿಶೆಯಲ್ಲಿ ಈ ಕಾರ್ಯಕ್ರಮ ಸಹಕಾರಿಯಾಗಿದ್ದು, ಕನ್ನಡ ಕಟ್ಟುವ ಕೆಲಸಕ್ಕೆ ಸದಾ ಕೈಜೋಡಿಸುವೆ ಎಂದು ಜೆಡಿಎಸ್‌ ರಾಜ್ಯ ಯುವ ಘಟಕದ ಉಪಾಧ್ಯಕ್ಷ ಶರಣಗೌಡ ಕಂದಕೂರು ಹೇಳಿದರು.

Advertisement

ಕಡೇಚೂರು ಗ್ರಾಮದಲ್ಲಿ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು, ಸ್ಪರ್ಷ ಚಾರಿಟೇಬಲ್‌ ಟ್ರಸ್ಟ್‌ ಸಹಯೋಗದೊಂದಿಗೆ ಆಯೋಜಿಸಿದ್ದ ಗಡಿ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗುರುಮಠಕಲ್‌ ವ್ಯಾಪ್ತಿಯ ಗಡಿಭಾಗದಲ್ಲಿ ನಿರಂತರ ಕನ್ನಡದ ಚಟುವಟಿಕೆ ಸರ್ಕಾರ ಮತ್ತು ಇತರೆ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಮೂಲಕ ನಿರಂತರ ಜಾಗೃತಿ ನಡೆಯಲಿ ಎಂದರು.

ಜಿಲ್ಲಾ ಕಸಾಪ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ ಮಾತನಾಡಿ, ಬರುವ ದಿನಗಳಲ್ಲಿ ಗಡಿಭಾಗದಲ್ಲಿ ಸಾಹಿತ್ಯ ಪರಿಷತ್ತಿನ ಮೂಲಕ ಹೆಚ್ಚೆಚ್ಚು ಚಟುವಟಿಕೆ ಹಮ್ಮಿಕೊಳ್ಳಲಾಗುವುದು ಎಂದರು.

ತಾಪಂ ಮಾಜಿ ಅಧ್ಯಕ್ಷ ಸಿದ್ದನಗೌಡ ಕಡೇಚೂರು ಮಾತನಾಡಿ, ಉತ್ಸವ, ಸಮಾರಂಭ ಕೇವಲ ಒಂದೇ ದಿನಕ್ಕೆ ಸೀಮಿತವಾಗದೇ ನಿರಂತರ ನಡೆಯಬೇಕು ಎಂದರು.

ಕರ್ನಾಟಕ ಜಾನಪದ ಪರಿಷತ್‌ ಜಿಲ್ಲಾಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ಮಾತನಾಡಿ, ಗಡಿ ಭಾಗದ ಕನ್ನಡಿಗರ ಸ್ಥಿತಿಗತಿಗಳ ಕುರಿತು ಉಪನ್ಯಾಸ ನೀಡಿದರು. ಟ್ರಸ್ಟ್‌ ಅಧ್ಯಕ್ಷ ಬಸವರಾಜ ಮೊಟ್ನಳ್ಳಿ ಅಧ್ಯಕ್ಷತೆ ವಹಿಸಿದ್ದರು.

Advertisement

ಇದೇ ಸಂದರ್ಭದಲ್ಲಿ ಕರಡಿ ಮಜಲು, ತತ್ವಪದ ಗಾಯನ, ಮೊಹರಂ ಕುಣಿತ, ಭಜನೆ ಸೇರಿದಂತೆ ವಿವಿಧ ಪ್ರಕಾರದ ಕಲಾ ಪ್ರದರ್ಶನ ನಡೆಯಿತು. ಈ ವೇಳೆ ಆರ್‌. ಮಹಾದೇವಪ್ಪಗೌಡ ಅಬ್ಬೆತುಮಕೂರ್‌, ಅಯ್ಯಣ್ಣ ಹುಂಡೇಕಾರ, ಚಂದ್ರಶೇಖರ, ಇಮಾಮ್‌ಹುಸೇನ್‌, ವಿನಯಕುಮಾರ, ಡಾ| ಭೀಮರಾಯ ಲಿಂಗೇರಿ, ಬಸವಂತ್ರಾಯಗೌಡ ಮಾಲಿಪಾಟೀಲ್‌, ಸ್ವಾಮಿದೇವ ದಾಸನಕೇರಿ, ಚನ್ನಪ್ಪ ಠಾಣಾಗುಂದಿ, ನೂರುಂದಪ್ಪ ಲೆವಡಿ, ನಾಗೇಂದ್ರ ಜಾಜಿ, ದೇವರಾಜ ವರಕನಳ್ಳಿ ಇತರರಿದ್ದರು. ಶಿಕ್ಷಕ ಮೌನೇಶ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next