ಕಲಬುರಗಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಳಂದ ಕ್ಷೇತ್ರದಲ್ಲಿ ಸ್ಪರ್ಧಿಸಲು ಮುಂದೆ ಬಂದರೆ ಆಳಂದ ಕ್ಷೇತ್ರ ಬಿಟ್ಟು ಕೊಟ್ಟು ತಾವು ತ್ಯಾಗ ಮಾಡುವುದಾಗಿ ಮಾಜಿ ಶಾಸಕ ಬಿ.ಆರ್. ಪಾಟೀಲ್ ತಿಳಿಸಿದರು.
ಪಕ್ಷದ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ನಾಮಪತ್ರ ಸಲ್ಲಿಸಿದರೆ ಸಾಕು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ತಮ್ಮದು ಎಂದರು.
ಆಳಂದ ಕ್ಷೇತ್ರ ಸಿದ್ದರಾಮಯ್ಯ ಅವರಿಗೆ ಬಿಟ್ಟು ಕೊಟ್ಟು, ತಾವು ಕ್ಷೇತ್ರ ತ್ಯಾಗ ಮಾಡುವ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಆದರೆ ಇನ್ನೊಂದು ಸಲ ಸಿಎಂ ಆಗುವ ಆಸೆ ಹೊಂದಿದ್ದಾರೆ. ಹೀಗಾಗಿ ಆಳಂದಕ್ಕೆ ಬಂದರೆ ಕೊಡ ಹಾಲು ಕುಡಿದಷ್ಟು ಸಂತೋಷವಾಗುತ್ತದೆ ಎಂದು ಬಿ.ಆರ್. ಪಾಟೀಲ್ ಹೇಳಿದರು.
ಐದನೇ ಗ್ಯಾರಂಟಿ: ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಗಳಿಗೆ ಬಿಜೆಪಿ ಥಂಡಾ ಹೊಡೆದಿದೆ. ಐದನೇ ಗ್ಯಾರಂಟಿಯಾಗಿ ರೈತರ ಕೃಷಿ ಸಾಲ ಮನ್ನಾ ಸೇರಬಹುದಾಗಿದೆ ಎಂದು ಬಿ.ಆರ್. ಪಾಟೀಲ್ ಇದೇ ಸಂದರ್ಭದಲ್ಲಿ ಸುಳಿವು ನೀಡಿದರು.
Related Articles
ಇನ್ನಷ್ಟು ವಿಕೆಟ್ ಪತನ: ಮಾಜಿ ಸಚಿವ ಬಾಬುರಾವ ಚಿಂಚನಸೂರ ಅವರಂತೆ ಇನ್ನಷ್ಟು ವಿಕೆಟ್ ಗಳು ಬಿಜೆಪಿಯಿಂದ ಪತನವಾಗಲಿವೆ. ಕಾದು ನೋಡಿ ಎಂದರಲ್ಲದೇ ಯಾರ್ಯಾರು ಬರ್ತಾರೆಂದರೆ ಊಹಿಸಿಕೊಳ್ಳಲು ಸಾಧ್ಯವಿಲ್ಲದಷ್ಟು ಬಿಜೆಪಿಯವರು ಕಾಂಗ್ರೆಸ್ ಗೆ ಬರಲಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ:ಹಿಂದುತ್ವವನ್ನು ಸೋಲಿಸಬಹುದು..; ವಿವಾದಾತ್ಮಕ ಟ್ವೀಟ್ ಮಾಡಿದ ನಟ ಚೇತನ್ ಬಂಧನ
ಕಳೆದ ನಾಲ್ಕು ದಿನಗಳ ಹಿಂದೆ ಜಿಲ್ಲೆಯಲ್ಲಿ ಅದರಲ್ಲೂ ಆಳಂದ ತಾಲೂಕಿನ ಸುರಿದ ಅಕಾಲಿಕ ಆಲಿಕಲ್ಲು ಮಳೆಗೆ ಸೂಕ್ತ ಪರಿಹಾರ ನೀಡುವಂತೆ ರಾಜ್ಯಪಾಲರಿಗೆ ಪತ್ರ ಬರೆದಿರುವುದಾಗಿ ತಿಳಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ, ಮುಖಂಡರಾದ ಸಿದ್ದರಾಮ ಪ್ಯಾಟಿ, ಗಣೇಶ ಪಾಟೀಲ್ ಸೇರಿದಂತೆ ಮುಂತಾದವರಿದ್ದರು.