Advertisement

English!; ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಒಂದು ತಿಂಗಳಲ್ಲೇ ಇಂಗ್ಲಿಷ್ ಕಲಿಸುತ್ತೇನೆ

07:38 PM Mar 24, 2024 | Team Udayavani |

ಬೆಳಗಾವಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಮತಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿರುವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಒಂದು ತಿಂಗಳಲ್ಲೇ ಇಂಗ್ಲಿಷ್ ಕಲಿಸುವುದಾಗಿ ಬೆಳಗಾವಿಯ ಖ್ಯಾತ ಇಂಗ್ಲಿಷ್ ತರಬೇತುದಾರ ಜಿ.ಎಲ್.ಮಂಜುನಾಥ ತಿಳಿಸಿದ್ದಾರೆ.

Advertisement

ಮೂಲತಃ ಹಾಸನದವರಾಗಿರುವ ಮಂಜುನಾಥ ಕಳೆದ 20 ವರ್ಷಗಳಿಂದ ಬೆಳಗಾವಿಯಲ್ಲಿ ಟೈಮ್ ಇಂಗ್ಲಿಷ್ ಟ್ರೈನಿಂಗ್ ಅಕಾಡೆಮಿ ಮೂಲಕ ವಿದ್ಯಾರ್ಥಿಗಳು, ಉದ್ಯೋಗಾರ್ಥಿಗಳು ಹಾಗೂ ನಾಗರಿಕರಿಗೆ ಇಂಗ್ಲಿಷ್ ಕಲಿಸಿಕೊಡುತ್ತಿದ್ದಾರೆ.ಕೋಟ ಶ್ರೀನಿವಾಸ ಪೂಜಾರಿ ಅವರು ಯಾವುದೇ ಕಾರಣಕ್ಕೆ ಭಾಷೆಗಾಗಿ ಭಯಪಡಬೇಕಾಗಿಲ್ಲ, ನಾನು ಅವರಿಗೆ ಕೇವಲ ಒಂದೇ ತಿಂಗಳಲ್ಲಿ ಇಂಗ್ಲಿಷ್ ಕಲಿಸುತ್ತೇನೆ. ಅದರಲ್ಲೂ ಉಚಿತವಾಗಿ ಇಂಗ್ಲಿಷ್ ಹೇಳಿಕೊಡುತ್ತೇನೆ ಎಂದು ತಿಳಿಸಿದ್ದಾರೆ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದಿರುವ ಜಯಪ್ರಕಾಶ ಹೆಗ್ಡೆ ಅವರು ಬ್ರಹ್ಮಾವರದಲ್ಲಿ ಮಾಡಿದ ಭಾಷಣದಲ್ಲಿ ತಮ್ಮ ಎದುರಾಳಿಗೆ ಇಂಗ್ಲಿಷ್ ಮತ್ತು ಹಿಂದಿ ಬಾರದೆ ಇರುವುದರಿಂದ ಲೋಕಸಭೆಯಲ್ಲಿ ಸಮಸ್ಯೆಗಳಿಗೆ ಸ್ಪಂದನೆ ಹಾಗೂ ಸಂವಹನಕ್ಕೆ ಕಷ್ಟವಾಗುತ್ತದೆ ಎಂದು ಹೇಳಿದ್ದರು. ಈ ವಿಚಾರ ಭಾರಿ ಚರ್ಚೆಯಾಗುತ್ತಿರುವ ವೇಳೆಯಲ್ಲೇ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಇಂಗ್ಲಿಷ್ ಕಲಿಸಿಕೊಡುವುದಾಗಿ ಮಂಜುನಾಥ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next