Advertisement

‘ಅಪೂರ್ಣಗೊಂಡ ಕಾಮಗಾರಿ ಶೀಘ್ರ ಪೂರ್ಣಗೊಳಿಸುವೆ’

02:34 PM Jun 14, 2019 | Team Udayavani |

ಜಮಖಂಡಿ: ಬಾಗಲಕೋಟೆ-ಕುಡಚಿ ರೈಲು ಮಾರ್ಗ ಕಾಮಗಾರಿ ಶೀಘ್ರ ಮುಗಿಸಲು ಸಿಎಂ ಹಾಗೂ ಅಧಿಕಾರಿಗಳ ಮೇಲೆ ಒತ್ತಡ ತರುವ ಮೂಲಕ ಜಿಲ್ಲೆಯಲ್ಲಿ ಅಪೂರ್ಣಗೊಂಡ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳಿಸಲು ಪ್ರಯತ್ನಿಸುವುದಾಗಿ ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು.

Advertisement

ನಗರದಲ್ಲಿ ಗುರುವಾರ ಜಮಖಂಡಿ ವಿಧಾನಸಭೆ ಮತಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಬಾಗಲಕೋಟೆ-ಕುಡಚಿ ರೈಲು ಮಾರ್ಗಕ್ಕೆ ಹೆಚ್ಚಿನ ಆದ್ಯತೆ ನೀಡಿ, ಈ ಭಾಗದ ಜನತೆಗೆ ಅನುಕೂಲವಾಗುವಂತೆ ಮಾಡಲಾಗುತ್ತದೆ. ರೈಲು ಮಾರ್ಗ ವಿಳಂಬಕ್ಕೆ ರಾಜ್ಯ ಸರ್ಕಾರವೇ ಹೊಣೆಯಾಗಿದೆ. ಈಗಾಗಲೇ ಕೇಂದ್ರ ಸರ್ಕಾರ ತನ್ನ ಪಾಲಿನ ಅನುದಾನ ನೀಡಿದ್ದು, ಭೂಸ್ವಾಧೀನ ಪ್ರಕ್ರಿಯೆ ವಿಳಂಬದಿಂದ ಕಾಮಗಾರಿ ನಿಧಾನವಾಗಿ ಸಾಗಿದೆ ಎಂದರು.

ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂದು ಹೇಳಿದರೂ ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಕಣಕ್ಕಿಳಿದು ಗೆಲುವು ಸಾಧಿಸಿರುವುದು ಸಂತೋಷ ನೀಡಿದೆ. ಜನರ ಪ್ರೀತಿ ವಿಶ್ವಾಸಕ್ಕೆ ಎಂದೂ ಚ್ಯುತಿ ಬಾರದಂತೆ ನಡೆದುಕೊಳ್ಳುವುದಾಗಿ ಹೇಳಿದರು. ಅಪೂರ್ಣಗೊಂಡ ಡಾ| ಗುರುದೇವ ರಾನಡೆ ಸಮುದಾಯ ಭವನಕ್ಕೆ ಕೇಂದ್ರದಿಂದ ಇನ್ನಷ್ಟು ಅನುದಾನ ತಂದು ಕಾಮಗಾರಿ ಪೂರ್ಣಗೊಳಿಸುವ ಭರವಸೆ ನೀಡಿದರು. ಬಾಗಲಕೋಟೆ ಲೋಕಸಭೆ ಮತಕ್ಷೇತ್ರದಲ್ಲಿನ ಜನರ ನಾಡಿ ಮಿಡಿತಕ್ಕೆ ಸ್ಪಂದಿಸಿ, ಜನರ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಹೇಳಿದರು.

ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಮಾತನಾಡಿ, ರಾಜ್ಯದ 171 ವಿಧಾನಸಭೆ ಮತಕ್ಷೇತ್ರದಲ್ಲಿ ಬಿಜೆಪಿ ಪ್ರಥಮ ಸ್ಥಾನದಲ್ಲಿದೆ. ಶೀಘ್ರದಲ್ಲಿ ಸಮ್ಮಿಶ್ರ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ರಚನೆಗೆ ಕ್ಷಣಗಣನೆ ನಡೆದಿದೆ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಕಂಡ ರಾಮರಾಜ್ಯ ಕನಸನ್ನು ಪ್ರಧಾನಿ ನರೇಂದ್ರ ಮೋದಿ ನನಸು ಮಾಡುತ್ತಿದ್ದರಿಂದ ಹೆಚ್ಚಿನ ಸಂಖ್ಯೆಯ ಬಿಜೆಪಿ ಸಂಸದರು ಲೋಕಸಭೆಗೆ ಹೋಗಿದ್ದಾರೆ. ಬಿಜೆಪಿ ತತ್ವ-ಸಿದ್ದಾಂತಗಳನ್ನು ಅರಿತು ಕಾರ್ಯಕರ್ತರು ಸಂಘಟಿತರಾಗಬೇಕು. ಕಾಂಗ್ರೆಸ್‌ ಪಕ್ಷದ ಮುಖಂಡರು ವಿನಾಕಾರಣ ಬಿಜೆಪಿ ಟೀಕಿಸುತ್ತಿರುವುದು ಖಂಡನೀಯ. ಪ್ರಧಾನಿ ನರೇಂದ್ರ ಮೋದಿ ಜಗತ್ತಿನ ಮಾದರಿ ಪ್ರಧಾನಿಯಾಗಲಿದ್ದಾರೆ ಎಂದರು.

Advertisement

ತೇರದಾಳ ಶಾಸಕ, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದು ಸವದಿ, ಬಿಜೆಪಿ ಮುಖಂಡ, ಉದ್ಯಮಿ ಜಗದೀಶ ಗುಡಗುಂಟಿ, ಜಿ.ಎಸ್‌.ನ್ಯಾಮಗೌಡ, ಬಸವರಾಜ ಸಿಂಧೂರ, ಜಿಪಂ ಸದಸ್ಯ ಶಿವಾನಂದ ಪಾಟೀಲ ಮಾತನಾಡಿದರು. ಟಿಎಪಿಸಿಎಂಎಸ್‌ ಸೊಸಾಯಿಟಿಗೆ ಹಾಗೂ ಎಪಿಎಂಸಿಗೆ ಆಯ್ಕೆಯಾದ ನೂತನ ಸದಸ್ಯರನ್ನು ಸನ್ಮಾನಿಸಲಾಯಿತು.

ತಾಪಂ ಅಧ್ಯಕ್ಷೆ ನಾಗವ್ವ ಕುರಣಿ, ತಿಮ್ಮನಗೌಡ ಬಿರಾದಾರ, ಈಶ್ವರ ಆದೆಪ್ಪನ್ನವರ, ಅಶೋಕ ತುಂಗಳ, ಜಿಪಂ ಸದಸ್ಯ ಬಸವರಾಜ ಬಿರಾದಾರ, ಬಸವರಾಜ ಕಲೂತಿ, ನಾಗಪ್ಪ ಸನದಿ, ದೇವಲ ದೇಸಾಯಿ, ಹನಮಂತ ಇಟ್ಟಿ, ಏಗಪ್ಪ ಸವದಿ, ಮನೋಹರ ಶಿರೋಳ, ಡಾ| ವಿಜಯಲಕ್ಷ್ಮೀ ತುಂಗಳ, ವಿಜಯಲಕ್ಷ್ಮೀ ಉಕುಮನಾಳ, ಶಶಿಕಾಂತ ವಿಶ್ವಬ್ರಾಹ್ಮಣ ಇದ್ದರು.

ಬಿಜೆಪಿ ನಗರ ಘಟಕ ಅಧ್ಯಕ್ಷ ಡಾ| ರಾಕೇಶ ಲಾಡ ಸ್ವಾಗತಿಸಿದರು. ಜಿಲ್ಲಾ ಕಾರ್ಯದರ್ಶಿ ಸಿ.ಟಿ.ಉಪಾಧ್ಯೆ ನಿರೂಪಿಸಿದರು. ನಗರಸಭೆ ಮಾಜಿ ಸದಸ್ಯ ಶ್ರೀನಿವಾಸ ಅಪರಂಜಿ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next