Advertisement

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಪ್ರಯತ್ನಿಸುವೆ

10:14 AM Oct 17, 2019 | sudhir |

ನವದೆಹಲಿ : ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Advertisement

ಪ್ರತಿಪಕ್ಷ ನಾಯಕ ಸ್ಥಾನ ದೊರೆತ ಬಳಿಕ ದೆಹಲಿಗೆ ತೆರಳಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹೈಕಮಾಂಡ್ ನನ್ನ ಮೇಲೆ ನಂಬಿಕೆ ಇಟ್ಟು ಪ್ರತಿಪಕ್ಷ ನಾಯಕ ಸ್ಥಾನ ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ್ದೇನೆ‌, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಎಲ್ಲಾ ರೀತಿಯ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ಅನರ್ಹ ಶಾಸಕರನ್ನು ಪಕ್ಷಕ್ಕೆ ಸೇರಿಸಲ್ಲ :
ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಅನರ್ಹ ಶಾಸಕರನ್ನು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರಿಸುವ ಪ್ರಶ್ನೆಯೇ ಇಲ್ಲ. ಪಕ್ಷದ ಸಿದ್ದಾಂತ ಒಪ್ಪಿ ಯಾರು ಬೇಕಾದರೂ ಕಾಂಗ್ರೆಸ್ ಸೇರಬಹುದು ಎಂದು ಹೇಳಿದ್ದೆ. ಆದರೆ, ಮೈತ್ರಿ ಸರ್ಕಾರ ಪತನಗೊಳಿಸಿದ ಅನರ್ಹ ಶಾಸಕರನ್ನು‌ ಮತ್ತೆ ಪಕ್ಷಕ್ಕೆ ಯಾವ ಕಾರಣಕ್ಕೂ ಸೇರ್ಪಡೆ ಮಾಡುವುದಿಲ್ಲ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next