ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹುಟ್ಟೂರಿನಲ್ಲಿ ಬುಧವಾರ 10.50ಕ್ಕೆ ಮತದಾನ ಮಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್ ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮೋದಿ, ಶಾ ಎಷ್ಟೆಲ್ಲಾ ರ್ಯಾಲಿ, ಸಭೆ ಮಾಡಿದರೂ ವರ್ಕೌಟ್ ಆಗಲ್ಲ. ಹಣವನ್ನು ನೀರಿನಂತೆ ಖರ್ಚು ಮಾಡಿದರೂ ಜನ ಅವರ ಪರ ಇಲ್ಲ. ಬಿಜೆಪಿ ಅವಧಿಯ ದುರಾಡಳಿತ, ಜನ ವಿರೋಧಿ ನೀತಿಗಳಿಂದ ಬೇಸತ್ತಿದ್ದಾರೆ. ಕಾಂಗ್ರೆಸ್ ಈ ಬಾರಿ ಅಧಿಕಾರಕ್ಕೆ ಬರಲಿದೆ. ನಾನೂ ಈ ಕ್ಷೇತ್ರದಲ್ಲಿ ಭಾರಿ ದೊಡ್ಡ ಅಂತರದಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದರು.
ಸಿಎಂ ಬೊಮ್ಮಾಯಿ ಅವರು ಬಿಜೆಪಿ ಸ್ಪಷ್ಟ ಬಹುಮತ ಪಡೆಯುತ್ತೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ಎಲ್ಲ ಪಕ್ಷದವರು ಪೂರ್ಣಬಹುಮತ ಬರುತ್ತೆ ಅಂತಲೇ ಹೇಳುವುದು, ಎಲ್ಲರೂ ವಿಶ್ವಾಸದಲ್ಲೇ ಇರುತ್ತಾರೆ. ಆದರೆ ನಾವು ಅಧಿಕಾರಕ್ಕೆ ಬರುವುದು ಖಚಿತ ಎಂದರು.