Advertisement

ರಾಜ್ಯದಲ್ಲೇ ಅತೀ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇನೆ:ಪ್ರಮೋದ್‌

02:20 PM Mar 29, 2018 | |

ಉಡುಪಿ: ‘ರಾಜ್ಯದಲ್ಲೇ ಅತೀ ಹೆಚ್ಚು ಮತಗಳ ಅಂತರದಿಂದ ನಾನು ಗೆಲ್ಲುತ್ತೇನೆ, ಕಾಂಗ್ರೆಸ್‌ ಅಭ್ಯರ್ಥಿಗಳ ಪೈಕಿ ಅತೀ ದೊಡ್ಡ ಗೆಲುವು ನನ್ನದಾಗಲಿದೆ’ ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಗುರುವಾರ ಹೇಳಿಕೆ ನೀಡಿದ್ದಾರೆ.

Advertisement

ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಪ್ರಮೋದ್‌ ‘ನಾನು ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ ಎನ್ನುವುದು ಸುಳ್ಳು. ನಾನು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದೇನೆ’ ಎಂದರು. 

‘ಪಕ್ಷಕ್ಕೆ ದ್ರೋಹ ಬಗೆಯುವುದಿಲ್ಲ,  ಕಾರ್ಯಕರ್ತರಿಗೆ ವಂಚಿಸುವುದಿಲ್ಲ. ಬಿಜೆಪಿಯಿಂದ ಯಾರೇ ಪ್ರತಿಸ್ಫರ್ಧಿ ಆಂದರೂ ಡೊಂಟ್‌ ಕೇರ್‌’ ಎಂದರು. 

Advertisement

Udayavani is now on Telegram. Click here to join our channel and stay updated with the latest news.

Next