ಬೇರೆ ಯಾವ ಪಕ್ಷಕ್ಕೂ ಸೇರುವ ಪ್ರಶ್ನೆಯೇ ಇಲ್ಲ ಎಂದು ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ತಿಳಿಸಿದರು.
Advertisement
ಸುದ್ದಿಗಾರರೊಂದಿಗೆ ಮಾತನಾಡಿ, ಕ್ಷೇತ್ರದ ಜನ ಚುನಾವಣೆಯಲ್ಲಿ ಆಶೀರ್ವದಿಸಿದ್ದಾರೆ. ಅವರ ಋಣ ತೀರಿಸಬೇಕಿದೆ. ಸಾಮಾನ್ಯ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿಯ ಅಭ್ಯರ್ಥಿಯನ್ನು ಗೆಲ್ಲಿಸಿರುವುದು ಕಡಿಮೆ ಸಾಧನೆಯೇನಲ್ಲ. ಹೀಗಿರುವಾಗ ನಾನು ಪಕ್ಷ ಬಿಟ್ಟು ಹೋದರೆ ಕ್ಷೇತ್ರದ ಜನ ಕಲ್ಲಿನಲ್ಲಿ ಹೊಡೆಯುತ್ತಾರೆ ಎಂದರು